IPL 2025: 10 ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಇಲ್ಲಿದೆ
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಲ್ಲಿ ಮೆಗಾ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಕೆಲವೇ ಕೆಲವು ಆಟಗಾರರನ್ನು ಮಾತ್ರ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶವಿದಲಿದೆ. ಉಳಿದ ಎಲ್ಲಾ ಆಟಗಾರರನ್ನು ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಹೀಗಾಗಿ ಮುಂಬರುವ ಐಪಿಎಲ್ ಸೀಸನ್ನಲ್ಲಿ ಪ್ರತಿ ತಂಡಗಳಲ್ಲೂ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.
1 / 12
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಐಪಿಎಲ್ ಫ್ರಾಂಚೈಸಿ ಮತ್ತು ಬಿಸಿಸಿಐ ನಡುವೆ ಮೆಗಾ ಹರಾಜಿನ ಕುರಿತಾಗಿ ಸಭೆ ನಡೆದಿದೆ. ಈ ಸಭೆಯ ಬೆನ್ನಲ್ಲೇ ಈ ಬಾರಿ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವುದು ಖಚಿತವಾಗಿದೆ. ಆದರೆ ಕೆಲ ಫ್ರಾಂಚೈಸಿಗಳು 6 ರಿಂದ 7 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೆಕೆಂಬ ಬೇಡಿಕೆಯಿಟ್ಟಿದೆ.
2 / 12
ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರರನ್ನ ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಯಾವ ಫ್ರಾಂಚೈಸಿ ಯಾವ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು ಎಂದು ನೋಡುವುದಾದರೆ...
3 / 12
ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.
4 / 12
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.
5 / 12
ಮುಂಬೈ ಇಂಡಿಯನ್ಸ್: ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
6 / 12
ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.
7 / 12
ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
8 / 12
ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.
9 / 12
ಪಂಜಾಬ್ ಕಿಂಗ್ಸ್: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
10 / 12
ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.
11 / 12
ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.
12 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.