AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಝಿಂಬಾಬ್ವೆ ವೇಗಿ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಪ್ಲೇಆಫ್​ಗೆ ಪ್ರವೇಶಿಸಿದೆ. ಆದರೆ ಪ್ಲೇಆಫ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ವೇಗಿ ಲುಂಗಿ ಎನ್​ಗಿಡಿ ತಂಡವನ್ನು ತೊರೆಯಲಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on: May 19, 2025 | 12:55 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳುವುದು ಖಚಿತವಾಗಿದೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ತಯಾರಿಗಾಗಿ ಸೌತ್ ಆಫ್ರಿಕಾ ಆಟಗಾರರು ಮೇ 26 ರಂದು ತವರಿಗೆ ತೆರಳಲಿದ್ದಾರೆ. ಹೀಗಾಗಿ ಲುಂಗಿ ಎನ್​ಗಿಡಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

1 / 5
ಇತ್ತ ಲುಂಗಿ ಎನ್​ಗಿಡಿ ಹೊರಗುಳಿಯುವುದು ಖಚಿತವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆಯ್ಕೆಯಾಗಿದ್ದಾರೆ.

2 / 5
ಬ್ಲೆಸಿಂಗ್ ಮುಝರಬಾನಿ ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1449 ಎಸೆತಗಳನ್ನು ಎಸೆದಿರುವ ಅವರು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಇದೀಗ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆರ್​ಸಿಬಿ ಮಾಡಿಕೊಂಡಿದೆ.

3 / 5
ಇನ್ನು ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಮೇ 23 ರಂದು ನಡೆಯಲಿರುವ ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮೇ 27 ರಂದು ಲಕ್ನೋದಲ್ಲಿ ನಡೆಯಲಿದೆ.

4 / 5
ಹೀಗಾಗಿ ಬ್ಲೆಸಿಂಗ್ ಮುಝರಬಾನಿ ಮೇ 27 ರಿಂದ ಆರ್​ಸಿಬಿ ಪರ ಕಣಕ್ಕಿಳಿಯಲು ಅರ್ಹರಾಗಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಕೊನೆಯ ಲೀಗ್ ಮ್ಯಾಚ್ ಹಾಗೂ ಪ್ಲೇಆಫ್ ಪಂದ್ಯಗಳ ವೇಳೆ ಝಿಂಬಾಬ್ವೆ ವೇಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

5 / 5
Follow us
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು

ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ

ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ

ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ

ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ