AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋತುಬಿದ್ದ ಭುಜಗಳು, ಬೇಸರಗೊಂಡ ಮುಖಗಳು… CSK ಹಿಸ್ಟರಿಯಲ್ಲೇ ಇದೇ ಮೊದಲ ಬಾರಿಗೆ..!

IPL 2025 CSK vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 190 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್​ಗಳಲ್ಲಿ 194 ರನ್​ ಬಾರಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 01, 2025 | 8:31 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 50 ಪಂದ್ಯಗಳು ಪೂರ್ಣಗೊಳ್ಳುವ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಪರಾಜಯಗೊಳ್ಳುವುದರೊಂದಿಗೆ ಸಿಎಸ್​ಕೆ ತಂಡದ ಕಪ್ ಗೆಲ್ಲುವ ಕನಸು ಕಮರಿದೆ.

1 / 5
ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು  ಬ್ಯಾಕ್ ಟು ಬ್ಯಾಕ್ ಎರಡು ಸೀಸನ್​ಗಳಲ್ಲಿ ಪ್ಲೇಆಫ್ ಆಡದೇ ಹೊರಬಿದ್ದಂತಾಗಿದೆ. ಕಳೆದ 15 ಸೀಸನ್​ಗಳಲ್ಲಿ ಸಿಎಸ್​ಕೆ ಕೇವಲ ಮೂರು ಬಾರಿ ಮಾತ್ರ ಪ್ಲೇಆಫ್ ಆಡಿರಲಿಲ್ಲ. ಇದೀಗ ನಾಲ್ಕನೇ ಬಾರಿಗೆ ಚೆನ್ನೈ ಪಡೆ ಲೀಗ್ ಹಂತದಿಂದಲೇ ಹೊರಬಿದ್ದಿದೆ.

2 / 5
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ 2020, 2022 ಮತ್ತು 2024 ರಲ್ಲಿ ಲೀಗ್ ಹಂತದಲ್ಲಿ ಹೊರಬಿದ್ದಿತ್ತು. ಆದರೆ ಇದೇ ಮೊದಲ ಬಾರಿ ಬ್ಯಾಕ್ ಟು ಬ್ಯಾಕ್ ಎರಡು ಸೀಸನ್​ಗಳಲ್ಲಿ ಪ್ಲೇಆಫ್​ ಪ್ರವೇಶಿಸುವಲ್ಲಿ ವಿಫಲವಾಗಿದೆ. 2024 ರಲ್ಲಿ ಲೀಗ್ ಹಂತದಲ್ಲೇ ಹೊರಬಿದ್ದಿದ್ದ ಧೋನಿ ಪಡೆ ಈ ಬಾರಿ ಕೂಡ ಅದನ್ನೇ ಪುನರಾವರ್ತಿಸಿದೆ.

3 / 5
ಇಂತಹದೊಂದು ವೈಫಲ್ಯದಿಂದಾಗಿ ಸೂಪರ್ ಕಿಂಗ್ಸ್ ಆಟಗಾರರು ನಿರಾಶೆಗೊಂಡಂತೆ ಕಂಡುಬಂದರು. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅವರ ಮುಖದಲ್ಲಿ ನಿರಾಶೆ ಎದ್ದು ಕಾಣುತ್ತಿತ್ತು. ಧೋನಿಯಿಂದ ಹಿಡಿದು ಜಡೇಜಾವರೆಗೆ ಎಲ್ಲರೂ ಬೇಸರದೊಂದಿಗೆ ಹೆಜ್ಜೆ ಹಾಕಿದ್ದರು.

4 / 5
ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರೊಂದಿಗೆ ಸುದೀರ್ಘ ಚರ್ಚೆಯಲ್ಲಿ ತೊಡಗಿಸಿಕೊಂಡಿರುವುದು ಕೂಡ ಕಂಡು ಬಂತು. ಒಟ್ಟಿನಲ್ಲಿ 5 ಬಾರಿಯ ಚಾಂಪಿಯನ್ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಸೀಸನ್​ಗಳಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದು ನಿರಾಶೆ ಅನುಭವಿಸಿದೆ. ಈ ನಿರಾಶೆಯೊಂದಿಗೆ ಈ ಬಾರಿ ಕಪ್ ಗೆಲ್ಲಬೇಕೆಂಬ ಸಿಎಸ್​ಕೆ ತಂಡ ಕನಸು ಕೂಡ ಕಮರಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ