AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ತಂಡಕ್ಕೆ ಪ್ಲೇಆಫ್​​ಗೇರಲು ಇನ್ನೂ ಇದೆ ಚಾನ್ಸ್

Csk playoffs chances 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 43ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 154 ರನ್ ಕಲೆಹಾಕಿದರೆ, ಈ ಗುರಿಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಎಸ್​ಆರ್​​ಹೆಚ್ ತಂಡ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Apr 26, 2025 | 7:25 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.5 ಓವರ್​ಗಳಲ್ಲಿ 154 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 18.4 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 155 ರನ್​ಗಳಿಸಿ ಐದು ವಿಕೆಟ್​ಗಳ ಜಯ ಸಾಧಿಸಿದೆ.

2 / 6
ಈ ಸೋಲಿನೊಂದಿಗೆ ಸಿಎಸ್​ಕೆ ತಂಡದ ಪರಾಜಯದ ಸಂಖ್ಯೆ 7 ಕ್ಕೇರಿದೆ. ಈವರೆಗೆ 9 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ ಏಳು ಪಂದ್ಯಗಳಲ್ಲಿ ಪರಾಜಯಗೊಂಡು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದಾಗ್ಯೂ ಸಿಎಸ್​ಕೆ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ.

3 / 6
ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆದು ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಒಂದು ವೇಳೆ ಅಂಕ ಪಟ್ಟಿಯಲ್ಲಿ ಅಗ್ರ-4 ರಲ್ಲಿ ಕಾಣಿಸಿಕೊಳ್ಳುವ ತಂಡಗಳು 16 ಅಂಕಗಳನ್ನು ಕಲೆಹಾಕಿದರೆ ಸಿಎಸ್​ಕೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ.

4 / 6
ಅಂದರೆ ಇಲ್ಲಿ ಸಿಎಸ್​ಕೆ ತಂಡವು ಪ್ಲೇಆಫ್​ ಪ್ರವೇಶಿಸಬೇಕಿದ್ದರೆ, ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಹಾಗೆಯೇ ಲೀಗ್​ ಹಂತದ ಮುಕ್ತಾಯದ ವೇಳೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡವೊಂದು 14 ಅಂಕಗಳನ್ನು ಮಾತ್ರ ಪಡೆದಿರಬೇಕಾಗುತ್ತದೆ.

5 / 6
ಹೀಗೆ ಅಂಕ ಪಟ್ಟಿಯಲ್ಲಿರುವ ನಾಲ್ಕನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳೊಂದಿಗೆ ಕಾಣಿಸಿಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ನೆಟ್ ರನ್ ರೇಟ್​ನೊಂದಿಗೆ 14 ಪಾಯಿಂಟ್ಸ್ ಪಡೆದು ಪ್ಲೇಆಫ್​ಗೆ ಪ್ರವೇಶಿಸಬಹುದು. ಆದರೆ ಅದಕ್ಕೂ ಮುನ್ನ ಸಿಎಸ್​ಕೆ ತಂಡ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಅಲ್ಲದೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡದ ಪಾಯಿಂಟ್ಸ್ 14 ದಾಟದಂತೆ ಪ್ರಾರ್ಥಿಸಬೇಕು. ಹೀಗಾದಲ್ಲಿ ಮಾತ್ರ ಸಿಎಸ್​ಕೆ ತಂಡವನ್ನು ಈ ಬಾರಿ ಪ್ಲೇಆಫ್​ನಲ್ಲಿ ಎದುರು ನೋಡಬಹುದು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ