
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಎಸ್ಆರ್ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.5 ಓವರ್ಗಳಲ್ಲಿ 154 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡವು 18.4 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 155 ರನ್ಗಳಿಸಿ ಐದು ವಿಕೆಟ್ಗಳ ಜಯ ಸಾಧಿಸಿದೆ.

ಈ ಸೋಲಿನೊಂದಿಗೆ ಸಿಎಸ್ಕೆ ತಂಡದ ಪರಾಜಯದ ಸಂಖ್ಯೆ 7 ಕ್ಕೇರಿದೆ. ಈವರೆಗೆ 9 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗೆದ್ದಿರುವುದು ಕೇವಲ 2 ಮ್ಯಾಚ್ಗಳಲ್ಲಿ ಮಾತ್ರ. ಇನ್ನುಳಿದ ಏಳು ಪಂದ್ಯಗಳಲ್ಲಿ ಪರಾಜಯಗೊಂಡು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದಾಗ್ಯೂ ಸಿಎಸ್ಕೆ ತಂಡ ಪ್ಲೇಆಫ್ ರೇಸ್ನಿಂದ ಹೊರಬಿದ್ದಿಲ್ಲ.

ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆದು ಪ್ಲೇಆಫ್ಗೆ ಎಂಟ್ರಿ ಕೊಡಬಹುದು. ಒಂದು ವೇಳೆ ಅಂಕ ಪಟ್ಟಿಯಲ್ಲಿ ಅಗ್ರ-4 ರಲ್ಲಿ ಕಾಣಿಸಿಕೊಳ್ಳುವ ತಂಡಗಳು 16 ಅಂಕಗಳನ್ನು ಕಲೆಹಾಕಿದರೆ ಸಿಎಸ್ಕೆ ಪ್ಲೇಆಫ್ ರೇಸ್ನಿಂದ ಹೊರಬೀಳುವುದು ಖಚಿತ.

ಅಂದರೆ ಇಲ್ಲಿ ಸಿಎಸ್ಕೆ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಹಾಗೆಯೇ ಲೀಗ್ ಹಂತದ ಮುಕ್ತಾಯದ ವೇಳೆ ಪಾಯಿಂಟ್ಸ್ ಟೇಬಲ್ನಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡವೊಂದು 14 ಅಂಕಗಳನ್ನು ಮಾತ್ರ ಪಡೆದಿರಬೇಕಾಗುತ್ತದೆ.

ಹೀಗೆ ಅಂಕ ಪಟ್ಟಿಯಲ್ಲಿರುವ ನಾಲ್ಕನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳೊಂದಿಗೆ ಕಾಣಿಸಿಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ನೆಟ್ ರನ್ ರೇಟ್ನೊಂದಿಗೆ 14 ಪಾಯಿಂಟ್ಸ್ ಪಡೆದು ಪ್ಲೇಆಫ್ಗೆ ಪ್ರವೇಶಿಸಬಹುದು. ಆದರೆ ಅದಕ್ಕೂ ಮುನ್ನ ಸಿಎಸ್ಕೆ ತಂಡ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಅಲ್ಲದೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡದ ಪಾಯಿಂಟ್ಸ್ 14 ದಾಟದಂತೆ ಪ್ರಾರ್ಥಿಸಬೇಕು. ಹೀಗಾದಲ್ಲಿ ಮಾತ್ರ ಸಿಎಸ್ಕೆ ತಂಡವನ್ನು ಈ ಬಾರಿ ಪ್ಲೇಆಫ್ನಲ್ಲಿ ಎದುರು ನೋಡಬಹುದು.