IPL 2025: ಲೀಗ್ ಹಂತದಲ್ಲೇ ಹೊರಬೀಳುವ ಭೀತಿಯಲ್ಲಿ CSK
IPL 2025 CSK Playoffs Scenario: ಐಪಿಎಲ್ 2025ರ ಅಂಕ ಪಟ್ಟಿಯಲ್ಲಿ 6 ತಂಡಗಳು 10 ಅಂಕಗಳನ್ನು ಕಲೆಹಾಕಿದೆ. ಈ 6 ತಂಡಗಳಲ್ಲಿ 4 ತಂಡಗಳು ಮುಂದಿನ 3 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್ನಿಂದ ಹೊರಬೀಳಲಿದೆ. ಏಕೆಂದರೆ ಸಿಎಸ್ಕೆ ತಂಡದ ನೆಟ್ ರನ್ ರೇಟ್ ಮೈನಸ್ನಲ್ಲಿದ್ದು, ಹೀಗಾಗಿ ಮುಂದಿನ 6 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಉತ್ತಮ ನೆಟ್ ರನ್ ರೇಟ್ನಲ್ಲಿ ಹಿಂದೆ ಉಳಿದರೆ ಪ್ಲೇಆಫ್ಗೆ ಅರ್ಹತೆ ಪಡೆಯುವುದಿಲ್ಲ.
Updated on: Apr 21, 2025 | 10:54 AM

IPL 2025: ಈ ಬಾರಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಬಳಿಕ ಸಿಎಸ್ಕೆ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಗೆಲ್ಲುವ ಮೂಲಕ ಸೋಲಿನ ಸರಪಳಿಯನ್ನು ಕಳಚಿಕೊಂಡಿತು. ಇದೀಗ ಮತ್ತೆ ಸೋಲನುಭವಿಸಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ವಿಕೆಟ್ಗಳಿಂದ ಪರಾಜಯಗೊಂಡಿದೆ. ಈ ಸೋಲಿನೊಂದಿಗೆ ಸಿಎಸ್ಕೆ ತಂಡ ಪ್ಲೇಆಫ್ ಲೆಕ್ಕಾಚಾರಗಳು ಶುರುವಾಗಿದೆ. ಹೀಗಾಗಿ ಮುಂದಿನ 6 ಪಂದ್ಯಗಳು ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ನಿರ್ಣಾಯಕ.

ಏಕೆಂದರೆ, ಸಿಎಸ್ಕೆ ತಂಡವು ಆಡಿರುವ 8 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋಲನುಭವಿಸಿ -1.392 ನೆಟ್ ರನ್ ರೇಟ್ನೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಉಳಿದ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಸಿಎಸ್ಕೆ ಪ್ಲೇಆಫ್ಗೆ ನೇರವಾಗಿ ಅರ್ಹತೆ ಪಡೆಯಬಹುದು.

ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ನೇರವಾಗಿ ಪ್ಲೇಆಫ್ಗೆ ಅರ್ಹತೆ ಪಡೆಯುತ್ತವೆ. ಇದೀಗ ಕೇವಲ 4 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 6 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಹೀಗೆ ಎಲ್ಲಾ ಮ್ಯಾಚ್ಗಳಲ್ಲೂ ಗೆಲುವು ದಾಖಲಿಸಿದರೆ ಮಾತ್ರ, 16 ಅಂಕಗಳನ್ನು ಪಡೆಯಬಹುದು.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಸಿಎಸ್ಕೆ ತಂಡದ ಎದುರಾಳಿಗಳು ಯಾರೆಂದರೆ... ಸನ್ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್. ಈ 6 ಪಂದ್ಯಗಳಲ್ಲಿ ಜಯ ಸಾಧಿಸಿ ಸಿಎಸ್ಕೆ ಪ್ಲೇಆಫ್ಗೆ ಎಂಟ್ರಿ ಕೊಡಲಿದೆಯಾ ಅಥವಾ ಲೀಗ್ ಹಂತದಲ್ಲೇ ಹೊರಬೀಳಲಿದೆಯಾ ಕಾದು ನೋಡಬೇಕಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




