IPL 2025: ಲೀಗ್ ಹಂತದಲ್ಲೇ ಹೊರಬೀಳುವ ಭೀತಿಯಲ್ಲಿ CSK

Updated on: Apr 21, 2025 | 10:54 AM

IPL 2025 CSK Playoffs Scenario: ಐಪಿಎಲ್ 2025ರ ಅಂಕ ಪಟ್ಟಿಯಲ್ಲಿ 6 ತಂಡಗಳು 10 ಅಂಕಗಳನ್ನು ಕಲೆಹಾಕಿದೆ. ಈ 6 ತಂಡಗಳಲ್ಲಿ 4 ತಂಡಗಳು ಮುಂದಿನ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಸಿಎಸ್​ಕೆ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದ್ದು, ಹೀಗಾಗಿ ಮುಂದಿನ 6 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಉತ್ತಮ ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿದರೆ ಪ್ಲೇಆಫ್​ಗೆ ಅರ್ಹತೆ ಪಡೆಯುವುದಿಲ್ಲ.

1 / 5
IPL 2025: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಬಳಿಕ ಸಿಎಸ್​ಕೆ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಗೆಲ್ಲುವ ಮೂಲಕ ಸೋಲಿನ ಸರಪಳಿಯನ್ನು ಕಳಚಿಕೊಂಡಿತು. ಇದೀಗ ಮತ್ತೆ ಸೋಲನುಭವಿಸಿದೆ.

2 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ವಿಕೆಟ್​ಗಳಿಂದ ಪರಾಜಯಗೊಂಡಿದೆ. ಈ ಸೋಲಿನೊಂದಿಗೆ ಸಿಎಸ್​ಕೆ ತಂಡ ಪ್ಲೇಆಫ್ ಲೆಕ್ಕಾಚಾರಗಳು ಶುರುವಾಗಿದೆ. ಹೀಗಾಗಿ ಮುಂದಿನ 6 ಪಂದ್ಯಗಳು ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ನಿರ್ಣಾಯಕ.

3 / 5
ಏಕೆಂದರೆ, ಸಿಎಸ್​ಕೆ ತಂಡವು ಆಡಿರುವ 8 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋಲನುಭವಿಸಿ -1.392 ನೆಟ್​ ರನ್​ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಉಳಿದ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಸಿಎಸ್​ಕೆ ಪ್ಲೇಆಫ್​ಗೆ ನೇರವಾಗಿ ಅರ್ಹತೆ ಪಡೆಯಬಹುದು.

4 / 5
ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ನೇರವಾಗಿ ಪ್ಲೇಆಫ್​ಗೆ ಅರ್ಹತೆ ಪಡೆಯುತ್ತವೆ. ಇದೀಗ ಕೇವಲ 4 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 6 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಹೀಗೆ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದರೆ ಮಾತ್ರ, 16 ಅಂಕಗಳನ್ನು ಪಡೆಯಬಹುದು.

5 / 5
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಸಿಎಸ್​ಕೆ ತಂಡದ ಎದುರಾಳಿಗಳು ಯಾರೆಂದರೆ... ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್. ಈ 6 ಪಂದ್ಯಗಳಲ್ಲಿ ಜಯ ಸಾಧಿಸಿ ಸಿಎಸ್​ಕೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆಯಾ ಅಥವಾ ಲೀಗ್​ ಹಂತದಲ್ಲೇ ಹೊರಬೀಳಲಿದೆಯಾ ಕಾದು ನೋಡಬೇಕಿದೆ.