AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಬಾರಿ ಕಪ್ ಗೆಲ್ಲೋರು ಇವರೇ ಎಂದ ಡೇವಿಡ್ ವಾರ್ನರ್

IPL 2025 Final: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯಕ್ಕೆ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಂಟ್ರಿ ಕೊಟ್ಟಿದ್ದು, ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅಥವಾ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on:Jun 01, 2025 | 9:07 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಇದೀಗ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಕಣಕ್ಕಿಳಿಯಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿದೆ.

1 / 5
ಅದರಂತೆ ಜೂನ್ 1 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಅಂದರೆ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ತಂಡದ ಎದುರಾಳಿಯಾಗಿ ಮುಂಬೈ ಇಂಡಿಯನ್ಸ್ ಅಥವಾ ಪಂಜಾಬ್ ಕಿಂಗ್ಸ್ ಕಣಕ್ಕಿಳಿಯುವುದು ಖಚಿತ. ಆದರೆ ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನವೇ ಐಪಿಎಲ್​ನ ಮಾಜಿ ಆಟಗಾರ ಡೇವಿಡ್ ವಾರ್ನರ್, ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಹೆಸರಿಸಿದ್ದಾರೆ.

2 / 5
ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್, ನನ್ನ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯಲಿದೆ ಎಂದಿದ್ದಾರೆ. ಅಲ್ಲದೆ ಫೈನಲ್ ಪಂದ್ಯದಲ್ಲಿ ಮಿಂಚುವ ಮೂಲಕ ಜೋಶ್ ಹೇಝಲ್​ವುಡ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯಲಿದ್ದಾರೆ ಎಂದು ಸಹ ಭವಿಷ್ಯ ನುಡಿದಿದ್ದಾರೆ.

3 / 5
ಕಳೆದ 17 ವರ್ಷಗಳಲ್ಲಿ ಮೂರು ಬಾರಿ ಕಪ್ ಗೆಲ್ಲುವ ಸನಿಹಕ್ಕೆ ಬಂದಿದ್ದ ಆರ್​ಸಿಬಿ ತಂಡವು ಕೊನೆಯ ಹಂತದಲ್ಲಿ ಎಡವಿತ್ತು. ಇದೀಗ 9 ವರ್ಷಗಳ ಬಳಿಕ ಮತ್ತೊಮ್ಮೆ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಅದು ಕೂಡ ಭರ್ಜರಿ ಪ್ರದರ್ಶನ ನೀಡುವ ಮೂಲಕ. ಹೀಗಾಗಿಯೇ ಈ ಬಾರಿಯ ಐಪಿಎಲ್​ನಲ್ಲಿ ಟ್ರೋಫಿ ಎತ್ತಿ ಹಿಡಿಯುವ ಫೇವರೇಟ್ ತಂಡವಾಗಿ ಆರ್​ಸಿಬಿ ಗುರುತಿಸಿಕೊಂಡಿದೆ. 

4 / 5
ಅದರಂತೆ ಜೂನ್ 3 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಲಿದೆಯಾ  ಕಾದು ನೋಡಬೇಕಿದೆ.

5 / 5

Published On - 9:04 am, Sun, 1 June 25

Follow Us
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ

ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ

ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ

ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ

ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!

ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು

24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ

ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು

ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ