AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ ಪಂದ್ಯದಿಂದ ದಿಗ್ವೇಶ್ ರಾಥಿ ಅಮಾನತು

Digvesh Rathi: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಅತೀ ಹೆಚ್ಚು ಬಾರಿ ದಂಡ ಕಟ್ಟಿದ್ದು ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ. ನೋಟ್ ಬುಕ್​ ಸೆಲೆಬ್ರೇಷನ್​ನೊಂದಿಗೆ ಮೈದಾನದಲ್ಲಿ ಸಂಚಲನ ಸೃಷ್ಟಿಸಿದ್ದ ದಿಗ್ವೇಶ್ ಈವರೆಗೆ ಮೂರು ಬಾರಿ ದಂಡ ಕಟ್ಟಿದ್ದಾರೆ. ಅಲ್ಲದೆ ಇದೀಗ ಒಂದು ಪಂದ್ಯದಿಂದ ಅಮಾನತುಗೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:May 20, 2025 | 11:14 AM

IPL 2025: ಇಂಡಿಯುನ್ ಪ್ರೀಮಿಯರ್ ಲೀಗ್​ನಲ್ಲಿ ಅನುಚಿತ ವರ್ತನೆಯಿಂದಲೇ ಗಮನ ಸೆಳೆದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಾಥಿಯನ್ನು (Digvesh Rathi) ಮುಂದಿನ ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಜೊತೆ ಜಗಳಕ್ಕಿಳಿದಿದ್ದ ರಾಥಿಗೆ ಒಂದು ಪಂದ್ಯದ ನಿಷೇಧ ಹೇರಲಾಗಿದೆ.

1 / 6
ಈ ನಿಷೇಧದೊಂದಿಗೆ ದಿಗ್ವೇಶ್ ರಾಥಿಗೆ ಪಂದ್ಯ ಶುಲ್ಕದ ಶೇ 50 ರಷ್ಟು ದಂಡವನ್ನು ಸಹ ವಿಧಿಸಲಾಗಿದೆ. ಸದ್ಯ ಅವರ ಡಿಮೆರಿಟ್ ಪಾಯಿಂಟ್ 5 ಕ್ಕೇರಿದ್ದು, ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ದಿಗ್ವೇಶ್​ನನ್ನು ಹೊರಗಿಡುವಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೂಚಿಸಲಾಗಿದೆ.

2 / 6
ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ಬಳಿಕ ದಿಗ್ವೇಶ್ ರಾಥಿ ನೋಟ್​ಬುಕ್ ಸೆಲೆಬ್ರೇಷನ್​ನೊಂದಿಗೆ ಬ್ಯಾಟರ್​ನನ್ನು ಕೆಣಕಿದ್ದರು. ಈ ಅನುಚಿತ ವರ್ತನೆಗೆ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿತ್ತು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

3 / 6
ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಮನ್ ಧೀರ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಬಳಿಕ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ್ದರು. ಈ ಆಕ್ರೋಶಭರಿತ ಸಂಭ್ರಮಕ್ಕೆ ರಾಥಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿ, 2 ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

4 / 6
ಇದೀಗ ಮೂರನೇ ಬಾರಿಗೆ ದಿಗ್ವೇಶ್ ರಾಥಿ ಐಪಿಎಲ್​ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ದಿಗ್ವೇಶ್ ರಾಥಿಗೆ ಒಂದು ಪಂದ್ಯದ ನಿಷೇಧ ಹೇರಿದ್ದಾರೆ. ಇದರ ಜೊತೆಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿ, 2 ಡಿಮೆರಿಟ್ ಪಾಯಿಂಟ್ ನೀಡಿದ್ದಾರೆ.

5 / 6
ಇನ್ನು ದಿಗ್ವೇಶ್ ರಾಥಿ ಜೊತೆ ಮೈದಾನದಲ್ಲೇ ಜಗಳಕ್ಕಿಳಿದಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ. ಅತ್ತ ಒಂದು ಪಂದ್ಯದ ನಿಷೇಧಕ್ಕೆ ಒಳಗಾಗಿರುವ ದಿಗ್ವೇಶ್ ರಾಥಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ.

6 / 6

Published On - 11:06 am, Tue, 20 May 25

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ

ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!

ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್

ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ

ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?

ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ