IPL 2025: ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಪ್ಟನ್ ಯಾರೆಂದು ಬಹಿರಂಗಪಡಿಸಿದ RCB ಬ್ಯಾಟಿಂಗ್ ಕೋಚ್

|

Updated on: Jan 18, 2025 | 10:23 AM

IPL 2025 Delhi Capitals Captain: ಐಪಿಎಲ್​ನಲ್ಲಿ ಕಳೆದ ಕೆಲ ವರ್ಷಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ತೆರೆ ಎಳೆದಿದ್ದಾರೆ. ಖಾಸಗಿ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಡಿಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ನಾಯಕನ ಹೆಸರನ್ನು ಬಹಿರಂಗಪಡಿಸಿದ್ದಾರೆ.

2 / 5
ದಿನೇಶ್ ಕಾರ್ತಿಕ್ ಹಂಚಿಕೊಂಡ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅಕ್ಷರ್ ಪಟೇಲ್ ಮುನ್ನಡೆಸಲಿದ್ದಾರೆ. ಇದನ್ನು ಪುಷ್ಠೀಕರಿಸುವಂತೆ ANI ಕೂಡ ವರದಿ ಮಾಡಿದ್ದು, ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಚುಕ್ಕಾಣಿ ಅಕ್ಷರ್ ಪಟೇಲ್ ಪಾಲಾಗುವುದು ಬಹುತೇಕ ಖಚಿತ ಎನ್ನಬಹುದು.

3 / 5
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ರೇಸ್​ನಲ್ಲಿ ಅಕ್ಷರ್ ಪಟೇಲ್​ ಜೊತೆ ಫಾಫ್ ಡುಪ್ಲೆಸಿಸ್, ಕೆಎಲ್ ರಾಹುಲ್ ಹೆಸರುಗಳು ಮುಂಚೂಣಿಯಲ್ಲಿದ್ದವು. ಆದರೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಹಳೆಯ ಆಟಗಾರನಿಗೆ ನಾಯಕತ್ವ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

4 / 5
2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಕ್ಷರ್ ಪಟೇಲ್ ಅವರನ್ನು ಈ ಬಾರಿಯ ಮೆಗಾ ಹರಾಜಿಗೂ ಮುನ್ನ  16.50 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಇದೀಗ ಡೆಲ್ಲಿ ತಂಡದ ದುಬಾರಿ ಆಟಗಾರನಿಗೆ ಸಾರಥ್ಯ ನೀಡಲು ಮುಂದಾಗಿದ್ದಾರೆ. ಅದರಂತೆ ಈ ಬಾರಿ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

5 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.