IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!
Indian Premier League 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2025) ಬಿಸಿಸಿಐ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳಿಂದಾಗಿ ಈಗಾಗಲೇ ಐವರು ಆಟಗಾರರು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ಮೊದಲ ಸುತ್ತಿನಲ್ಲೇ ದಂಡ ಕಟ್ಟಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
Updated on: Apr 07, 2025 | 1:54 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶುರುವಾಗಿ 2 ವಾರಗಳು ಕಳೆದಿವೆ. ಈ ಎರಡು ವಾರಗಳಲ್ಲಿ ಒಟ್ಟು 19 ಪಂದ್ಯಗಳನ್ನಅಡಲಾಗಿದೆ. ಈ ಹತ್ತೊಂಬತ್ತು ಮ್ಯಾಚ್ಗಳಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ ಐವರು ಆಟಗಾರರಿಗೆ ದಂಡದ ಶಿಕ್ಷೆ ನೀಡಲಾಗಿದೆ. ಅದರಲ್ಲೂ ಓರ್ವ ಆಟಗಾರ ಎರಡೇ ವಾರಗಳಲ್ಲಿ 2 ಬಾರಿ ಫೈನ್ ಕಟ್ಟಿದ್ದಾರೆ. ಈವರೆಗೆ ಐಪಿಎಲ್ನಲ್ಲಿ ದಂಡ ಕಟ್ಟಿಸಿಕೊಂಡ ಆಟಗಾರರು ಯಾರೆಲ್ಲಾ ನೋಡುವುದಾದರೆ...

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಪಂತ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇಶಾಂತ್ ಶರ್ಮಾ: ಗುಜರಾತ್ ಟೈಟಾನ್ಸ್ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಪಂದ್ಯ ಶುಲ್ಕದ ಶೇ. 25 ರಷ್ಟು ದಂಡ ವಿಧಿಸಲಾಗಿದೆ.

ದಿಗ್ವೇಶ್ ರಾಠಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಠಿ ಈಗಾಗಲೇ ಎರಡು ಬಾರಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್ ಬುಕ್ ಸೆಲೆಬ್ರೇಷನ್ನೊಂದಿಗೆ ದಿಗ್ವೇಶ್ ರಾಠಿ ಕಾಣಿಸಿಕೊಂಡಿದ್ದಾರೆ. ಐಪಿಎಲ್ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.
























