AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಫೋರ್, 3 ಸಿಕ್ಸ್: ಕೊನೆಗೂ ಶತಕ ಪೂರೈಸಿದ ಗ್ಲೆನ್ ಮ್ಯಾಕ್ಸ್​ವೆಲ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ (ಐಪಿಎಲ್ 2025) ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರರಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಒಬ್ಬರು. ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ಮ್ಯಾಕ್ಸ್​ವೆಲ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಬರೋಬ್ಬರಿ 4.2 ಕೋಟಿ ರೂ.ಗೆ ಖರೀದಿಸಿತ್ತು.

ಝಾಹಿರ್ ಯೂಸುಫ್
|

Updated on: May 01, 2025 | 9:04 AM

Share
IPL 2025: ಗ್ಲೆನ್ ಮ್ಯಾಕ್ಸ್​​ವೆಲ್ (Glenn Maxwell) ಐಪಿಎಲ್​ನಲ್ಲಿ 100 ರನ್ ಕಲೆಹಾಕಿದ್ದಾರೆ. ಅದು ಕೂಡ ಎರಡು ಸೀಸನ್​ಗಳ ಮೂಲಕ ಎಂಬುದೇ ಅಚ್ಚರಿ. ಅಂದರೆ ಕಳೆದ ಎರಡು ಸೀಸನ್​ಗಳಿಂದ ಮ್ಯಾಕ್ಸ್​​ವೆಲ್ ಕಲೆಹಾಕಿರುವುದು ಕೇವಲ 100 ರನ್​ಗಳು ಮಾತ್ರ. ಕಳೆದ ಬಾರಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಮ್ಯಾಕ್ಸಿ ಈ ಸಲ ಪಂಜಾಬ್ ಕಿಂಗ್ಸ್ ಪರ ಆಡಿದ್ದರು.

1 / 6
IPL 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ ಕಲೆಹಾಕಿರುವುದು ಕೇವಲ 52 ರನ್​ಗಳು ಮಾತ್ರ. ಅಂದರೆ 5.78 ಸರಾಸರಿಯಲ್ಲಿ ರನ್​ಗಳಿಸಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

2 / 6
ಅದರಂತೆ ಹರಾಜಿನಲ್ಲಿ ಕಾಣಿಸಿಕೊಂಡ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 4.2 ಕೋಟಿ ರೂ. ನೀಡಿ ಖರೀದಿಸಿತ್ತು. ಅಲ್ಲದೆ ಈ ಬಾರಿ ಪಂಜಾಬ್ ಕಿಂಗ್ಸ್ ಪರ 7 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮ್ಯಾಕ್ಸಿ ಕಲೆಹಾಕಿರುವುದು 48 ರನ್​ಗಳು ಮಾತ್ರ. ಅಂದರೆ 8ರ ಸರಾಸರಿಯಲ್ಲಿ ರನ್​ ಗಳಿಸಿ ಮತ್ತೆ ಕಳಪೆ ಪ್ರದರ್ಶನ ನೀಡಿದ್ದಾರೆ.

3 / 6
ಈ ಎರಡು ಸೀಸನ್​ಗಳ ಮೂಲಕ ಇದೀಗ ಗ್ಲೆನ್ ಮ್ಯಾಕ್ಸ್​ವೆಲ್ ಐಪಿಎಲ್​ನಲ್ಲಿ 100 ರನ್​ಗಳನ್ನು ಪೂರೈಸಿದ್ದಾರೆ. ವಿಶೇಷ ಎಂದರೆ ಈ ಎರಡು ಸೀಸನ್​ಗಳಲ್ಲಿ 17 ಪಂದ್ಯಗಳಲ್ಲಿ 15 ಇನಿಂಗ್ಸ್ ಆಡಿರುವ ಮ್ಯಾಕ್ಸಿ ಗಳಿಸಿದ ಗರಿಷ್ಠ ಸ್ಕೋರ್ 30 ರನ್​ಗಳು. ಇನ್ನುಳಿದ 14 ಪಂದ್ಯಗಳಿಂದ ಕಲೆಹಾಕಿರುವುದು ಕೇವಲ 70 ರನ್​ಗಳು ಎಂದರೆ ನಂಬಲೇಬೇಕು.

4 / 6
ಅದರಲ್ಲೂ 15 ಇನಿಂಗ್ಸ್​ಗಳಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಬ್ಯಾಟ್​ನಿಂದ ಮೂಡಿಬಂದ ಸಿಕ್ಸ್​ಗಳ ಸಂಖ್ಯೆ ಕೇವಲ ಮೂರು. ಹಾಗೆಯೇ 11 ಫೋರ್​ಗಳನ್ನಷ್ಟೇ ಬಾರಿಸಲು ಶಕ್ತರಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ಪ್ರದರ್ಶನ ನೀಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ಮ್ಯಾಕ್ಸ್​ವೆಲ್ ಮುಂಚೂಣಿಯಲ್ಲಿದ್ದಾರೆ.

5 / 6
ಈ ವೈಫಲ್ಯದ ನಡುವೆ ಗ್ಲೆನ್ ಮ್ಯಾಕ್ಸ್​ವೆಲ್ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಬೆರಳಿನ ಮೂಳೆ ಮುರಿತಕ್ಕೊಳಗಾಗಿರುವ ಅವರನ್ನು ಪಂಜಾಬ್ ಕಿಂಗ್ಸ್ ತಂಡದಿಂದ ಕೈ ಬಿಡಲಾಗಿದೆ. ಇದರೊಂದಿಗೆ ಪಂಜಾಬ್ ಕಿಂಗ್ಸ್ ತಂಡದಲ್ಲೂ ಗ್ಲೆನ್ ಮ್ಯಾಕ್ಸ್​ವೆಲ್ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ

ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ