IPL 2025: ಮತ್ತೆ ಮತ್ತೆ ಠುಸ್ ಠುಸ್: ಐಪಿಎಲ್ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಮ್ಯಾಕ್ಸ್ವೆಲ್
IPL 2025 Glenn Maxwell: ಕಳೆದ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಗ್ಲೆನ್ ಮ್ಯಾಕ್ಸ್ವೆಲ್ ಕೊನೆಯ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಪಂಜಾಬ್ ಕಿಂಗ್ಸ್ ಪರ ಹೊಸ ಇನಿಂಗ್ಸ್ ಆರಂಭಿಸಿರುವ ಮ್ಯಾಕ್ಸಿ ಮೊದಲ ಮ್ಯಾಚ್ನಲ್ಲೇ ಸೊನ್ನೆ ಸುತ್ತಿದ್ದಾರೆ. ಅಂದರೆ ಐಪಿಎಲ್ನಲ್ಲಿ ತನ್ನ ಶೂನ್ಯದ ಸರಮಾಲೆಯನ್ನು ಮುಂದುವರೆಸಿದ್ದಾರೆ.
Updated on: Mar 26, 2025 | 7:31 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಅತ್ಯಂತ ಕೆಟ್ಟ ದಾಖಲೆಯೊಂದನ್ನು ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell) ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ 19 ಬಾರಿ ಸೊನ್ನೆ ಸುತ್ತುವ ಮೂಲಕ. ಅಹದಾಬಾದ್ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದ ಮ್ಯಾಕ್ಸ್ವೆಲ್ ಮೊದಲ ಎಸೆತದಲ್ಲೇ ಎಲ್ಬಿಡಬ್ಲ್ಯೂ ಆಗಿ ವಿಕೆಟ್ ಒಪ್ಪಿಸಿದ್ದರು.

ಈ ಶೂನ್ಯದೊಂದಿಗೆ ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್ವೆಲ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ರೋಹಿತ್ ಶರ್ಮಾ ಹಾಗೂ ದಿನೇಶ್ ಕಾರ್ತಿಕ್ ಹೆಸರಿನಲ್ಲಿತ್ತು.

ಐಪಿಎಲ್ನಲ್ಲಿ 234 ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 18 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿರುವ ರೋಹಿತ್ ಶರ್ಮಾ ಈವರೆಗೆ 253 ಇನಿಂಗ್ಸ್ ಆಡಿದ್ದು, ಈ ವೇಳೆ 18 ಬಾರಿ ಸೊನ್ನೆ ಸುತ್ತಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಹೆಚ್ಚು ಶೂನ್ಯಕ್ಕೆ ಔಟಾದ ಬ್ಯಾಟರ್ಗಳು ಎನಿಸಿಕೊಂಡಿದ್ದರು.

ಇದೀಗ 130ನೇ ಇನಿಂಗ್ಸ್ನಲ್ಲಿ ಸೊನ್ನೆ ಸುತ್ತುವ ಮೂಲಕ ಗ್ಲೆನ್ ಮ್ಯಾಕ್ಸ್ವೆಲ್ ತನ್ನ ಶೂನ್ಯಗಳ ಸಂಖ್ಯೆಯನ್ನು 19 ಕ್ಕೇರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಹೀನಾಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಗ್ಲೆನ್ ಮ್ಯಾಕ್ಸ್ವೆಲ್ ಅವರ ಈ ಡಕ್ ಔಟ್ ಹೊರತಾಗಿಯೂ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 20 ಫವರ್ಗಳಲ್ಲಿ 232 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಮೊದಲ ಪಂದ್ಯದಲ್ಲಿ 11 ರನ್ಗಳ ಜಯ ಸಾಧಿಸಿ ಶುಭಾರಂಭ ಮಾಡಿದೆ.



















