IPL 2025: ಮತ್ತೆ ಮತ್ತೆ ಠುಸ್ ಠುಸ್: ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಮ್ಯಾಕ್ಸ್​ವೆಲ್

|

Updated on: Mar 26, 2025 | 7:31 AM

IPL 2025 Glenn Maxwell: ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಕೊನೆಯ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಪಂಜಾಬ್ ಕಿಂಗ್ಸ್ ಪರ ಹೊಸ ಇನಿಂಗ್ಸ್ ಆರಂಭಿಸಿರುವ ಮ್ಯಾಕ್ಸಿ ಮೊದಲ ಮ್ಯಾಚ್​ನಲ್ಲೇ ಸೊನ್ನೆ ಸುತ್ತಿದ್ದಾರೆ. ಅಂದರೆ ಐಪಿಎಲ್​ನಲ್ಲಿ ತನ್ನ ಶೂನ್ಯದ ಸರಮಾಲೆಯನ್ನು ಮುಂದುವರೆಸಿದ್ದಾರೆ.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಅತ್ಯಂತ ಕೆಟ್ಟ ದಾಖಲೆಯೊಂದನ್ನು ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ 19 ಬಾರಿ ಸೊನ್ನೆ ಸುತ್ತುವ ಮೂಲಕ. ಅಹದಾಬಾದ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದ ಮ್ಯಾಕ್ಸ್​ವೆಲ್ ಮೊದಲ ಎಸೆತದಲ್ಲೇ ಎಲ್​ಬಿಡಬ್ಲ್ಯೂ ಆಗಿ ವಿಕೆಟ್ ಒಪ್ಪಿಸಿದ್ದರು.

2 / 5
ಈ ಶೂನ್ಯದೊಂದಿಗೆ ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ರೋಹಿತ್ ಶರ್ಮಾ ಹಾಗೂ ದಿನೇಶ್ ಕಾರ್ತಿಕ್ ಹೆಸರಿನಲ್ಲಿತ್ತು.

3 / 5
ಐಪಿಎಲ್​ನಲ್ಲಿ 234 ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 18 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿರುವ ರೋಹಿತ್ ಶರ್ಮಾ ಈವರೆಗೆ 253 ಇನಿಂಗ್ಸ್ ಆಡಿದ್ದು, ಈ ವೇಳೆ 18 ಬಾರಿ ಸೊನ್ನೆ ಸುತ್ತಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಶೂನ್ಯಕ್ಕೆ ಔಟಾದ ಬ್ಯಾಟರ್​​ಗಳು ಎನಿಸಿಕೊಂಡಿದ್ದರು.

4 / 5
ಇದೀಗ 130ನೇ ಇನಿಂಗ್ಸ್​ನಲ್ಲಿ ಸೊನ್ನೆ ಸುತ್ತುವ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ತನ್ನ ಶೂನ್ಯಗಳ ಸಂಖ್ಯೆಯನ್ನು 19 ಕ್ಕೇರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಹೀನಾಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ ಅವರ ಈ ಡಕ್​ ಔಟ್ ಹೊರತಾಗಿಯೂ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 20 ಫವರ್​ಗಳಲ್ಲಿ 232 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಮೊದಲ ಪಂದ್ಯದಲ್ಲಿ 11 ರನ್​ಗಳ ಜಯ ಸಾಧಿಸಿ ಶುಭಾರಂಭ ಮಾಡಿದೆ.