AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಆರ್​ಸಿಬಿ ಪಡೆ ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು 16 ಅಂಕಗಳನ್ನು ಕಲೆಹಾಕಿದೆ. ಇನ್ನು ಒಂದು ಮ್ಯಾಚ್ ಜಯಿಸಿದರೆ ಪ್ಲೇಆಫ್ ಹಂತಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on: May 15, 2025 | 11:10 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಪುನರಾರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶನಿವಾರದಿಂದ ಆರಂಭವಾಗಲಿರುವ ಐಪಿಎಲ್​ನ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು.

1 / 5
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ರಜತ್ ಪಾಟಿದಾರ್ ಅವರ ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಬ್ಯಾಂಡೇಜ್ ಹಾಕಿಕೊಂಡಿದ್ದ ಪಾಟಿದಾರ್​ಗೆ ವೈದ್ಯರು ಕೆಲ ದಿನಗಳವರೆಗೆ ವಿಶ್ರಾಂತಿ ಸೂಚಿಸಿದ್ದರು. ಇದೀಗ ವಿಶ್ರಾಂತಿ ಮುಗಿಸಿ ರಜತ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ.

2 / 5
ರಜತ್ ಪಾಟಿದಾರ್ ಬೆಂಗಳೂರಿನಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದು, ಈ ವೇಳೆ ಅವರ ಕೈಗೆ ಹಾಕಲಾಗಿರುವ ಬ್ಯಾಂಡೇಜ್ ಅನ್ನು ಬಿಚ್ಚಿರುವುದು ಕಂಡು ಬಂದಿದೆ. ಇದೇ ವೇಳೆ ಯಾವುದೇ ಸಮಸ್ಯೆ ಇಲ್ಲದಂತೆ ಭಾಸವಾಗಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಜತ್ ಪಾಟಿದಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

3 / 5
ಇದಕ್ಕೂ ಮುನ್ನ ಬೆರಳಿಗೆ ಗಾಯವಾಗಿರುವ ಕಾರಣ ರಜತ್ ಪಾಟಿದಾರ್ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎನ್ನಲಾಗಿತ್ತು. ಅಷ್ಟೇ ಅಲ್ಲದೆ ಪಾಟಿದಾರ್ ಬದಲಿಗೆ ಆರ್​ಸಿಬಿ ತಂಡದ ನಾಯಕತ್ವದ ಜವಾಬ್ದಾರಿಯನ್ನು ಜಿತೇಶ್ ಶರ್ಮಾಗೆ ವಹಿಸಲಾಗಿತ್ತು. ಆದರೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಪಾಟಿದಾರ್ ಆರ್​ಸಿಬಿ ತಂಡಕ್ಕೆ ಮರಳಿದ್ದು, ಹೀಗಾಗಿ ಉಳಿದ ಪಂದ್ಯಗಳಲ್ಲಿ ಅವರೇ ಆರ್​ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ.

4 / 5
ಒಟ್ಟಿನಲ್ಲಿ ಐಪಿಎಲ್​ ಅನ್ನು ಒಂದು ವಾರದವರೆಗೆ ಮುಂದೂಡಿದ್ದು, ಆರ್​ಸಿಬಿ ಪಾಲಿಗೆ ವರವಾಗಿ ಪರಿಣಮಿಸಿದೆ. ಏಕೆಂದರೆ ಈ ಒಂದು ವಾರದ ಅವಧಿಯಲ್ಲಿ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಅವರ ಬೆರಳಿನ ಗಾಯವು ಗುಣವಾಗಿದೆ. ಇದರೊಂದಿಗೆ ಆರ್​ಸಿಬಿ ತಂಡದ ಉಳಿದ ಪಂದ್ಯಗಳಲ್ಲೂ ರಜತ್ ಪಾಟಿದಾರ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ