IPL 2025: ಶುಭ್ಮನ್ ಗಿಲ್ಗೆ ದಂಡ ವಿಧಿಸಿದ ಬಿಸಿಸಿಐ
IPL 2025 GT vs DC: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 35ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 203 ರನ್ ಕಲೆಹಾಕಿದರೆ, ಈ ಗುರಿಯನ್ನು ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ 19.2 ಓವರ್ಗಳಲ್ಲಿ ಚೇಸ್ ಮಾಡಿದೆ.
Updated on: Apr 20, 2025 | 10:54 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 35ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಗುಜರಾತ್ ಟೈಟಾನ್ಸ್ (GT) ತಂಡದ ನಾಯಕ ಶುಭ್ಮನ್ ಗಿಲ್ಗೆ (Shubman Gill) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ಗೆ 12 ಲಕ್ಷ ರೂ. ಫೈನ್ ವಿಧಿಸಲಾಗಿದೆ. ಇದರೊಂದಿಗೆ ಈ ಬಾರಿಯ ಐಪಿಎಲ್ನಲ್ಲಿ ದಂಡದ ಶಿಕ್ಷೆಗೆ ಗುರಿಯಾದ 7ನೇ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ....

ಅಕ್ಷರ್ ಪಟೇಲ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಪಂತ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸಂಜು ಸ್ಯಾಮ್ಸನ್: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೂಡ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಮುಗಿಸಿರಲಿಲ್ಲ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವು ರಿಯಾನ್ ಪರಾಗ್ ನಾಯಕತ್ವದಲ್ಲಿ ಒಮ್ಮೆ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದರಿಂದ, 2ನೇ ಬಾರಿ ತಪ್ಪು ಪುನರಾವರ್ತಿಸಿದ ಕಾರಣ ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.



















