IPL 2025: ಹೀಗಾದ್ರೆ RCB ಐಪಿಎಲ್​ನಿಂದ ಹೊರಬೀಳುವುದು ಖಚಿತ..!

Updated on: May 18, 2025 | 11:08 AM

IPL 2025 RCB Playoffs Scenario: ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್ 2025 ) ಸೀಸನ್-18ರ 58 ಪಂದ್ಯಗಳ ಮುಕ್ತಾಯದ ವೇಳೆಗೆ 4 ತಂಡಗಳು ಪ್ಲೇಆಫ್​ ರೇಸ್​ನಿಂದ ಹೊರಬಿದ್ದರೆ, 6 ತಂಡಗಳ ನಡುವೆ ಮುಂದಿನ ಹಂತಕ್ಕೇರುವ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿಯಲ್ಲಿ ಮುಂಚೂಣಿಯಲ್ಲಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

1 / 8
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 58 ಪಂದ್ಯಗಳು ಮುಗಿದಿವೆ. ಐವತ್ತೆಂಟು ಪಂದ್ಯಗಳು ಪೂರ್ಣಗೊಂಡರೂ ಯಾವುದೇ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೂ ಪ್ಲೇಆಫ್ ಎಂಟ್ರಿ ಖಚಿತವಾಗಿಲ್ಲ. ಏಕೆಂದರೆ ಪ್ಲೇಆಫ್ ಸಮೀಕರಣದಲ್ಲಿ ಏರುಪೇರಾದರೆ ಅಗ್ರಸ್ಥಾನದಲ್ಲಿರುವ ಆರ್​ಸಿಬಿ ತಂಡವೇ ಹೊರಬೀಳುತ್ತೆ..!

2 / 8
ಹೌದು, ಆರ್​ಸಿಬಿ ಮತ್ತು ಕೆಕೆಆರ್ ನಡುವಣ ಪಂದ್ಯವು ರದ್ದಾಗಿರುವ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೇವಲ 1 ಅಂಕ ಮಾತ್ರ ಲಭಿಸಿದೆ. ಇದರೊಂದಿಗೆ ಆರ್​ಸಿಬಿ ತಂಡದ ಒಟ್ಟು ಅಂಕಗಳ ಸಂಖ್ಯೆ 17 ಕ್ಕೇರಿದೆ. ಆದರೆ ಅತ್ತ ಉಳಿದ 5 ತಂಡಗಳಿಗೂ 17 ಅಥವಾ ಅದಕ್ಕಿಂತ ಹೆಚ್ಚಿನ ಪಾಯಿಂಟ್ಸ್ ಪಡೆಯಲು ಅವಕಾಶವಿದೆ.

3 / 8
ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್​ ಸ್ಥಾನ ಖಚಿತವಾಗಲು ರಾಜಸ್ಥಾನ್ ರಾಯಲ್ ಹಾಗೂ ಪಂಜಾಬ್ ಕಿಂಗ್ಸ್​ ನಡುವಣ ಪಂದ್ಯವನ್ನು ಎದುರು ನೋಡಬೇಕು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋತರೆ, ಆರ್​ಸಿಬಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಒಂದು ವೇಳೆ ಪಂಜಾಬ್ ಕಿಂಗ್ಸ್ ಗೆದ್ದರೆ, ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳ ನಡುವಣ ಪಂದ್ಯವನ್ನು ಎದುರು ನೋಡಬೇಕು. ಈ ಮ್ಯಾಚ್​ನಲ್ಲಿ ಗುಜರಾತ್ ಟೈಟಾನ್ಸ್​ ಜಯ ಸಾಧಿಸಿದರೆ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸಲಿದೆ.

4 / 8
ಇನ್ನು ಮೇ 18 ರಂದು ನಡೆಯಲಿರುವ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಜಯ ಸಾಧಿಸಿದರೆ, ಆರ್​ಸಿಬಿ ತಂಡವು ಪ್ಲೇಆಫ್​ಗೇರಲು ಸನ್​ರೈಸರ್ಸ್ ಹೈದರಾಬಾದ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲ್ಲುವುದು ಅನಿವಾರ್ಯ. ಒಂದು ವೇಳೆ ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ತಂಡ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ.

5 / 8
ಏಕೆಂದರೆ ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೆ 20 ಅಂಕಗಳನ್ನು ಪಡೆಯಲಿದೆ. ಇನ್ನು ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದು, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೆ ಒಟ್ಟು 17 ಅಂಕಗಳನ್ನು ಪಡೆಯಲಿದೆ.

6 / 8
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೆ ಒಟ್ಟು 17 ಅಂಕಗಳನ್ನು ಪಡೆಯಲಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೂ, ಸಿಎಸ್​ಕೆ ಅಥವಾ ಎಲ್ಎಸ್​ಜಿ ವಿರುದ್ಧ ಗೆದ್ದರೆ 18 ಅಂಕಗಳನ್ನು ಪಡೆಯಲಿದೆ.

7 / 8
ಇಂತಹದೊಂದು ಫಲಿತಾಂಶಗಳು ಮೂಡಿಬಂದರೆ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಲಿದೆ. ಇತ್ತ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಅಂಕಗಳು (17 ಪಾಯಿಂಟ್ಸ್​) ಸಮಗೊಳ್ಳಲಿದೆ. ಈ ವೇಳೆ ಆರ್​ಸಿಬಿ ತಂಡವು ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿದರೆ ಟೂರ್ನಿಯಿಂದ ಹೊರಬೀಳಲಿದೆ. 

8 / 8
ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ಅಥವಾ ಗುಜರಾತ್ ಟೈಟಾನ್ಸ್ ತಂಡಗಳ ಗೆಲುವು ಅನಿವಾರ್ಯ. ಒಂದು ವೇಳೆ ಇಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಜಯಗಳಿಸಿದರೆ, ಆರ್​ಸಿಬಿ ತಂಡವು ಮುಂದಿನ ಪಂದ್ಯದಲ್ಲಿ ಎಸ್​ಆರ್​​ಹೆಚ್ ಅಥವಾ ಲಕ್ನೋ ಸೂಪರ್ ಜೈಂಟ್ಸ್​ ತಂಡವನ್ನು ಸೋಲಿಸಬೇಕು. ಒಂದು ವೇಳೆ ಈ ಮೇಲೆ ಹೇಳಿದಂತೆ ಫಲಿತಾಂಶ ಮೂಡಿಬಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ.