AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಎಷ್ಟು ಬಾರಿ ಸ್ಥಗಿತಗೊಂಡಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

IPL 2025: ಭಾರತ ಮತ್ತು ಪಾಕಿಸ್ತಾನ್ ನಡುವಿನ ಉದ್ವಿಗ್ನತೆಯಿಂದಾಗಿ, ಐಪಿಎಲ್ 2025 ಸೀಸನ್ ಅನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. 2008 ರಲ್ಲಿ ಪ್ರಾರಂಭವಾದ ವಿಶ್ವದ ಅತಿದೊಡ್ಡ ಟಿ20 ಲೀಗ್, ಇತ್ತೀಚಿನ ವರ್ಷಗಳಲ್ಲಿ ವಿವಿಧ ಕಾರಣಗಳಿಂದಾಗಿ ಕೆಲವು ಸಂದರ್ಭಗಳಲ್ಲಿ ಮಧ್ಯದಲ್ಲಿಯೇ ಸ್ಥಗಿತಗೊಂಡಿದೆ. ಆ ಸಂದರ್ಭಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: May 10, 2025 | 7:55 AM

Share
ವಿಶ್ವದ ಅತಿದೊಡ್ಡ ಟಿ20 ಲೀಗ್, ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2025) 18 ನೇ ಸೀಸನ್​ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷ ಉಲ್ಬಣಗೊಂಡ ಕಾರಣ, ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪಂದ್ಯಾವಳಿಯನ್ನು ಒಂದು ವಾರಗಳವರೆಗೆ ಮುಂದೂಡಿದೆ.

1 / 5
74 ಪಂದ್ಯಗಳ ಈ ಟೂರ್ನಿಯಲ್ಲಿ ಈಗಾಗಲೇ 58 ಮ್ಯಾಚ್​ಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 16 ಪಂದ್ಯಗಳು ಮಾತ್ರ. ಈ 16 ಪಂದ್ಯಗಳು ಒಂದು ವಾರಗಳ ಬಳಿಕ ಮತ್ತೆ ಆಯೋಜನೆಗೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೂಡ ಇದೇ ರೀತಿಯಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್​ ಅನ್ನು ಮರು ನಿಗದಿಯೊಂದಿಗೆ ಪೂರ್ಣಗೊಳಿಸಲಾಗಿತ್ತು. ಅಂದರೆ ಐಪಿಎಲ್ ಪಂದ್ಯಾವಳಿಯನ್ನು ಮುಂದೂಡಬೇಕಾಗಿ ಬಂದಿರುವುದು ಇದೇ ಮೊದಲಲ್ಲ.

2 / 5
ಐಪಿಎಲ್ 2020: ಮೊದಲ ಬಾರಿಗೆ, ಐಪಿಎಲ್ ಅನ್ನು 2020 ರಲ್ಲಿ ಮುಂದೂಡಬೇಕಾಯಿತು. ಮಾರ್ಚ್ 29 ರಂದು ಪ್ರಾರಂಭವಾಗಬೇಕಿದ್ದ ಟೂರ್ನಿಯು ಕರೋನಾ ಕಾರಣದಿಂದ ನಿಗದಿತ ಸಮಯದಲ್ಲಿ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ  ಭಾರತೀಯ ಮಂಡಳಿಯು ಮಾರ್ಚ್ 15 ರಂದು ಪಂದ್ಯಾವಳಿಯನ್ನು ಏಪ್ರಿಲ್ 14 ರವರೆಗೆ ಮುಂದೂಡಿತ್ತು. ಆ ನಂತರ ಸೆಪ್ಟೆಂಬರ್ 19, 2020 ರಿಂದ ಪಂದ್ಯಾವಳಿಯನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು.

3 / 5
ಐಪಿಎಲ್ 2021: ಐಪಿಎಲ್ ಸೀಸನ್ 13 ಅನ್ನು ಕೊರೋನಾ ಭೀತಿ ಹಿನ್ನಲೆಯಲ್ಲಿ ಬಿಸಿಸಿಐ ಬಯೋ-ಬಬಲ್‌ನಲ್ಲಿ  ಆಯೋಜಿಸಲು ಪ್ಲ್ಯಾನ್ ರೂಪಿಸಿತ್ತು. ಅದರಂತೆ ಇಡೀ ಪಂದ್ಯಾವಳಿಯನ್ನು ಕೇವಲ 3-4 ಸ್ಥಳಗಳಲ್ಲಿ ಆಯೋಜಿಸಲಾಗಿತ್ತು. ಆದರೆ ಟೂರ್ನಿಯ ನಡುವೆ ಆಟಗಾರರಲ್ಲಿ ಕೋವಿಡ್ ಲಕ್ಷಣಗಳನ್ನು ಕಂಡು ಬಂದಿದ್ದರಿಂದ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದಾದ ಬಳಿಕ ಸೆಪ್ಟೆಂಬರ್ 19 ರಿಂದ ಉಳಿದ ಭಾಗವನ್ನು ಯುಎಇಯಲ್ಲಿ ಆಯೋಜಿಸಿ ಐಪಿಎಲ್ ಅನ್ನು ಪೂರ್ಣಗೊಳಿಸಲಾಗಿತ್ತು.

4 / 5
ಐಪಿಎಲ್ 2025: ಇದೀಗ ಐಪಿಎಲ್ ಅನ್ನು ಮೂರನೇ ಬಾರಿಗೆ ಮುಂದೂಡಲಾಗಿದೆ. ಈ ಬಾರಿ ಟೂರ್ನಿಯನ್ನು ಒಂದು ವಾರಗಳವರೆಗೆ ಸ್ಥಗಿತಗೊಳಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಪರಿಸ್ಥಿತಿ ಕೊನೆಗೊಂಡರೆ, ಮುಂದಿನ ವಾರದಿಂದ ಭಾರತದಲ್ಲೇ ಟೂರ್ನಿ ಆಯೋಜನೆಗೊಳ್ಳಲಿದೆ. ಇಲ್ಲದಿದ್ದರೆ, ಟೂರ್ನಿಯನ್ನು ಯುಎಇಗೆ ಸ್ಥಳಾಂತಿರಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

5 / 5
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ