IPL 2025: ಇಂದು 2 ತಂಡಗಳು ಗೆದ್ದರೆ RCB ಪ್ಲೇಆಫ್ಗೆ..!
IPL 2025 RCB Playoffs Scenario: ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ಹನ್ನೆರಡು ಪಂದ್ಯಗಳಲ್ಲಿ ಆರ್ಸಿಬಿ ತಂಡ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಕೆಕೆಆರ್ ವಿರುದ್ಧದ ಪಂದ್ಯವು ರದ್ದಾದ ಕಾರಣ ಒಂದು ಅಂಕವನ್ನು ಪಡೆದುಕೊಂಡಿದೆ. ಈ ಮೂಲಕ 17 ಪಾಯಿಂಟ್ಸ್ ಹೊಂದಿರುವ ಆರ್ಸಿಬಿ ಇದೀಗ ಪ್ಲೇಆಫ್ ಹೊಸ್ತಿಲಲ್ಲಿದೆ.
Updated on: May 18, 2025 | 8:10 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 58ನೇ ಪಂದ್ಯವು ಮಳೆಗೆ ಆಹುತಿಯಾಗಿದೆ. ಈ ಮಳೆಯಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ (RCB) ತಂಡವು ಪ್ಲೇಆಫ್ ರೇಸ್ನಿಂದ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಒಂದು ಅಂಕವನ್ನು ಮಾತ್ರ ಪಡೆದುಕೊಂಡಿದೆ. ಇದರಿಂದಾಗಿ ಆರ್ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ.

ಅಂದರೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ತಂಡವು ಗೆದ್ದು 2 ಅಂಕಗಳನ್ನು ಪಡೆದುಕೊಂಡಿದ್ದರೆ 18 ಪಾಯಿಂಟ್ಸ್ನೊಂದಿಗೆ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸುತ್ತಿತ್ತು. ಇದೀಗ ರಾಯಲ್ ಪಡೆಯ ಪ್ಲೇಆಫ್ ಪ್ರವೇಶ ಖಚಿತವಾಗಲು ಮುಂದಿನ ಪಂದ್ಯದವರೆಗೆ ಕಾಯಬೇಕು. ಅಂದರೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ಸಿಬಿ ಗೆದ್ದರೆ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.

ಅದಕ್ಕೂ ಮುನ್ನ ಆರ್ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ತಂಡ ಸೋಲಿಸಬೇಕು. ಇಂದು (ಮೇ 18) ನಡೆಯಲಿರುವ RR vs PBKS ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ಸೋಲನುಭವಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಡುವುದು ಖಚಿತವಾಗಲಿದೆ.

ಒಂದು ವೇಳೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ಇಂದು ನಡೆಯಲಿರುವ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ಸಾಕು. ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಕೂಡ ಆರ್ಸಿಬಿ ತಂಡದ ಪ್ಲೇಆಫ್ ಖಚಿತವಾಗಲಿದೆ.

ಹೀಗಾಗಿ ಇಂದು ನಡೆಯಲಿರುವ 2 ಪಂದ್ಯಗಳ ಫಲಿತಾಂಶದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಎಂಟ್ರಿ ನಿರ್ಧಾರವಾಗಲಿದೆ. ಇನ್ನು ಈ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗೆದ್ದರೆ, ಆರ್ಸಿಬಿ ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಸನ್ರೈಸರ್ಸ್ ಹೈದರಾಬಾದ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದರೆ ಸಾಕು. ಈ ಮೂಲಕ ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಬಹುದು.
