AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇನ್ನೂ ಬಾರದ RCB ತಂಡದ ಪ್ರಮುಖ ಆಟಗಾರ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​ 2025) ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Mar 15, 2025 | 1:04 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್​-18 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಈಗಾಗಲೇ ಆರ್​ಸಿಬಿ ತಂಡದ 7 ವಿದೇಶಿ ಆಟಗಾರರು ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಪ್ರಮುಖ ವೇಗಿ ಇನ್ನೂ ಸಹ ತಂಡವನ್ನು ಸೇರಿಕೊಂಡಿಲ್ಲ.

1 / 5
ಹೌದು, ಆರ್​ಸಿಬಿ ಈ ಬಾರಿ ಒಟ್ಟು 8 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಅವರಲ್ಲಿ ಇಂಗ್ಲೆಂಡ್ ತಂಡದ ಜೇಕಬ್ ಬೆಥೆಲ್, ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಇನ್ನು ಶ್ರೀಲಂಕಾದ ನುವಾನ್ ತುಷಾರ, ವೆಸ್ಟ್ ಇಂಡೀಸ್​ನ ರೊಮಾರಿಯೊ ಶೆಫರ್ಡ್, ಆಸ್ಟ್ರೇಲಿಯಾ ಟಿಮ್ ಡೇವಿಡ್ ಹಾಗೂ ಸೌತ್ ಆಫ್ರಿಕಾ ಲುಂಗಿ ಎನ್​ಗಿಡಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭ್ಯಾಸವನ್ನು ಶುರು ಮಾಡಿದ್ದಾರೆ.

2 / 5
ಇದಾಗ್ಯೂ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಆರ್​ಸಿಬಿ ತಂಡದ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿಲ್ಲ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಹ್ಯಾಝಲ್​ವುಡ್ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಣಕ್ಕಿಳಿದಿರಲಿಲ್ಲ. ಇದೀಗ ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾದರೂ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ.

3 / 5
ಇದಕ್ಕೆ ಮುಖ್ಯ ಕಾರಣ ಅವರ ಫಿಟ್​ನೆಸ್ ಸಮಸ್ಯೆ. ಏಕೆಂದರೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಆಟಗಾರರಿಗೆ ಮಾತ್ರ ಐಪಿಎಲ್ ಆಡಲು ಅವಕಾಶ ನೀಡುತ್ತದೆ. ಅದರಂತೆ ಇದೀಗ ಜೋಶ್ ಹ್ಯಾಝಲ್​ವುಡ್ ಆಸ್ಟ್ರೇಲಿಯಾದಲ್ಲಿ ಫಿಟ್​ನೆಸ್ ಟೆಸ್ಟ್ ಪಾಸ್ ಆಗಬೇಕಿದ್ದು, ಇದಾದ ಬಳಿಕವಷ್ಟೇ ಅವರಿಗೆ ಐಪಿಎಲ್​​ ಆಡಲು ಅನುಮತಿ ಸಿಗಲಿದೆ. ಹೀಗಾಗಿ ಜೋಶ್ ಹ್ಯಾಝಲ್​ವುಡ್ ಆಗಮನ ಮತ್ತಷ್ಟು ವಿಳಂಬವಾದರೂ ಅಚ್ಚರಿಪಡಬೇಕಿಲ್ಲ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ