AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಜೋಶ್ ಹೇಝಲ್​ವುಡ್ ಎಂಟ್ರಿಗೆ ಡೇಟ್ ಫಿಕ್ಸ್

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು.

ಝಾಹಿರ್ ಯೂಸುಫ್
|

Updated on: May 21, 2025 | 11:04 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಐಪಿಎಲ್​ನ ಉಳಿದ ಪಂದ್ಯಗಳಿಗಾಗಿ ಭಾರತಕ್ಕೆ ಮರಳುವುದು ಖಚಿತವಾಗಿದೆ. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆಯಲ್ಲಿ ಐಪಿಎಲ್​ ಸ್ಥಗಿತಗೊಂಡಿದ್ದರಿಂದ ಹೇಝಲ್​ವುಡ್ ತವರಿಗೆ ಮರಳಿದ್ದರು.

1 / 6
ಇತ್ತ ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್​ವುಡ್ ಸಿಎಸ್​ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

2 / 6
ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ ಜೋಶ್ ಹೇಝಲ್​ವುಡ್ ಅಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಆರ್​ಸಿಬಿ ವೇಗಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಭಾನುವಾರ, ಅಂದರೆ ಮೇ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಅಂದರೆ ಮೆ 23 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೂ ಜೋಶ್ ಹೇಝಲ್​ವುಡ್ ಅಲಭ್ಯರಾಗಲಿದ್ದಾರೆ. ಇನ್ನು ಮೇ 25 ರಂದು ಆರ್​​​ಸಿಬಿ ತಂಡವನ್ನು ಸೇರಿಕೊಂಡರೆ, ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ  ಕಣಕ್ಕಿಳಿಯಬಹುದು. 

4 / 6
ಇತ್ತ ಜೋಶ್ ಹೇಝಲ್​ವುಡ್  ರಿಟರ್ನ್ ಸುದ್ದಿಯು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಆಸೀಸ್ ವೇಗಿ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ.

5 / 6
ಹಾಗೆಯೇ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್​ಗಳನ್ನು ಎಸೆದಿರುವುದು ಸಹ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ ಒಟ್ಟು 103 ಡಾಟ್​ ಬಾಲ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಪ್ಲೇಆಫ್ ಹಂತಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳುವುದು ಖಚಿತವಾಗಿದ್ದು, ಇದರಿಂದ ರಾಯಲ್ ಪಡೆಯ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ