IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

|

Updated on: Mar 17, 2025 | 8:31 AM

IPL 2025: ಈ ಬಾರಿಯ ಐಪಿಎಲ್​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದರು. ಇವರಲ್ಲಿ 7 ಮಂದಿ ಕಳೆದ ವಾರವೇ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದರು. ಇದಾಗ್ಯೂ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್​ ಜೋಶ್ ಹ್ಯಾಝಲ್​ವುಡ್ ಮಾತ್ರ ಬೆಂಗಳೂರಿಗೆ ಆಗಮಿಸಿರಲಿಲ್ಲ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಈಗಾಗಲೇ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಪ್ರಮುಖ ಆಟಗಾರರು ಆರ್​ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ. ಇದಾಗ್ಯೂ ಆರ್​ಸಿಬಿ ಬಳಗದಲ್ಲಿ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕಾಣಿಸಿಕೊಂಡಿರಲಿಲ್ಲ.

2 / 5
ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಹ್ಯಾಝಲ್​ವುಡ್ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಹ್ಯಾಝಲ್​ವುಡ್​ ಈ ಬಾರಿಯ ಐಪಿಎಲ್​​ನಲ್ಲಿ ಆಡುತ್ತಾರೋ, ಇಲ್ಲವೊ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇದೀಗ ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಕ್ಕಿದೆ.

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭಾನುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅಲ್ಲದೆ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಇದರೊಂದಿಗೆ ಹ್ಯಾಝಲ್​ವುಡ್ ಐಪಿಎಲ್ ಸೀಸನ್-18 ರಲ್ಲಿ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

4 / 5
ಇನ್ನು ಆರ್​ಸಿಬಿ ತಂಡವು ಈ ಬಾರಿಯ ಐಪಿಎಲ್​ನ ಉದ್ಘಾಟನಾ ಪಂದ್ಯದ ಮೂಲಕ ಅಭಿಯಾನ ಆರಂಭಿಸಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಶುಭಾರಂಭ ಮಾಡಲಿದೆಯಾ ಕಾದು ನೋಡಬೇಕಿದೆ.

5 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.