IPL 2025 ಫೈನಲ್-WTC ಫೈನಲ್ ನಡುವೆ 15 ದಿನಗಳ ಗ್ಯಾಪ್

WTC 2025: ಭಾರತ ತಂಡವು ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಿದೆ. 2021 ರ ಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಸೋಲುವ ಮೂಲಕ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ WTC ಮುಡಿಗೇರಿಸಿಕೊಳ್ಳುವ ಅವಕಾಶ ಕೈಚೆಲ್ಲಿಕೊಂಡಿತು. ಇದಾದ ಬಳಿಕ 2023 ರ ಫೈನಲ್​ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತು. ಇದೀಗ ಮೂರನೇ ಬಾರಿಗೆ WTC ಫೈನಲ್​ ಆಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಝಾಹಿರ್ ಯೂಸುಫ್
|

Updated on: Aug 18, 2024 | 12:31 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮಾರ್ಚ್ ಅಂತ್ಯದ ವೇಳೆಗೆ ಶುರುವಾಗುವುದು ಬಹುತೇಕ ಖಚಿತ. ಏಕೆಂದರೆ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಈ ಟೂರ್ನಿಯ ಬಳಿಕ ಐಪಿಎಲ್ 2025 ಆರಂಭವಾಗಲಿದೆ.

1 / 5
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್ ಪಂದ್ಯವನ್ನು ಜೂನ್ ತಿಂಗಳಲ್ಲಿ ಲಾರ್ಡ್ಸ್ ಮೈದಾನದಲ್ಲಿ ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅಂದರೆ ಮಾರ್ಚ್​​ನಲ್ಲಿ ಐಪಿಎಲ್ ಆರಂಭವಾದರೆ ಜೂನ್​ಗೂ ಮುನ್ನ ಟೂರ್ನಿಯನ್ನು ಮುಗಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

2 / 5
ಏಕೆಂದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುವುದು ಬಹುತೇಕ ಖಚಿತ. ಪ್ರಸ್ತುತ WTC ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದ್ದು, ಮುಂದಿನ 10 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವು ನಾಲ್ಕೈದು ಪಂದ್ಯಗಳನ್ನು ಗೆದ್ದರೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಲಿದೆ.

3 / 5
ಹೀಗಾಗಿಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೂ 2 ವಾರಗಳ ಮುಂಚಿತವಾಗಿ ಐಪಿಎಲ್ ಮುಗಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. 2023ರ WTC ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತ್ತು. ಭಾರತೀಯ ಆಟಗಾರರು ಐಪಿಎಲ್ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್​ಗೆ ಮರಳಿದ್ದರಿಂದ ಸೋಲನುಭವಿಸಿದೆ ಎಂಬ ಟೀಕೆಗಳು ಕೇಳಿ ಬಂದಿದ್ದವು.

4 / 5
ಆದರೆ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೂ 15 ದಿನಗಳ ಮುಂಚಿತವಾಗಿ ಐಪಿಎಲ್​ ಫೈನಲ್ ಆಯೋಜಿಸುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಅಂದರೆ ಐಪಿಎಲ್ ಫೈನಲ್ ಹಾಗೂ WTC ಫೈನಲ್‌ ನಡುವೆ 15 ದಿನಗಳ ಅಂತರವಿರಲಿದೆ. ಈ ಎರಡು ವಾರಗಳ ಅವಧಿಯಲ್ಲಿ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಸಜ್ಜಾಗಲಿದೆ. ಈ ಮೂಲಕ ಚೊಚ್ಚಲ ಬಾರಿಗೆ WTC ಕಿರೀಟ ಮುಡಿಗೇರಿಸಿಕೊಳ್ಳಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

5 / 5
Follow us