IPL 2025: 10 ಪಂದ್ಯದಲ್ಲಿ 8 ಶತಕ: ಐಪಿಎಲ್ ಮೆಗಾ ಹರಾಜಿನಲ್ಲಿ ‘ಅಗ್ನಿ’

IPL 2025 Mega Auction: ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಐಪಿಎಲ್ ಮೆಗಾ ಹರಾಜಿಗಾಗಿ ಬರೋಬ್ಬರಿ 1574 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 1,165 ಭಾರತೀಯ ಆಟಗಾರರಿದ್ದರೆ, 409 ವಿದೇಶಿ ಆಟಗಾರರಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 13, 2024 | 11:54 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಯುವ ಆಟಗಾರ ಅಗ್ನಿ ಚೋಪ್ರಾ ಕೂಡ ಕಾಣಿಸಿಕೊಳ್ಳಲಿದ್ದಾರೆ.

1 / 5
ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಮನೆಮಾತಾಗಿರುವ ಅಗ್ನಿ ಚೋಪ್ರಾ ಐಪಿಎಲ್ ಮೆಗಾ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಕೂಡ ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ.

2 / 5
ಅಗ್ನಿ ಚೋಪ್ರಾ ಈಗಾಗಲೇ ರೆಡ್ ಬಾಲ್​ ಕ್ರಿಕೆಟ್​ನಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಆಡಿರುವ 10 ಪಂದ್ಯಗಳಲ್ಲಿ 8 ಶತಕಗಳನ್ನು ಬಾರಿಸಿರುವ ಅಗ್ನಿ, 92.11 ಸರಾಸರಿಯೊಂದಿಗೆ 1658 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಅಗ್ನಿಯ ಖರೀದಿಗೆ ಒಂದಷ್ಟು ಫ್ರಾಂಚೈಸಿಗಳು ಆಸಕ್ತಿ ತೋರಲಿದೆ.

3 / 5
ಅದರಲ್ಲೂ ಅಗ್ನಿ ಚೋಪ್ರಾ ಖರೀದಿಗೆ ಗುಜರಾತ್ ಟೈಟಾನ್ಸ್ ಮುಂದಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಅವರೊಂದಿಗಿನ ಗೆಳೆತನ. ಅಂದರೆ ಅಗ್ನಿ ಚೋಪ್ರಾ ಹಾಗೂ ಶುಭ್​ಮನ್ ಕ್ಲೋಸ್ ಫ್ರೆಂಡ್ಸ್. ಹೀಗಾಗಿ ಯಾವುದೇ ಫ್ರಾಂಚೈಸಿ ಖರೀದಿಸದೇ ಇದ್ದರೂ, ಗುಜರಾತ್ ಟೈಟಾನ್ಸ್​ ಅಗ್ನಿಗಾಗಿ ಬಿಡ್ಡಿಂಗ್ ನಡೆಸುವ ಸಾಧ್ಯತೆಯಿದೆ.

4 / 5
ಅಂದಹಾಗೆ ಅಗ್ನಿ ಚೋಪ್ರಾ ಬಾಲಿವುಡ್​ನ ಪ್ರಸಿದ್ಧ ನಿರ್ಮಾಪಕ/ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರ ಪುತ್ರ. ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೋ ಮುನ್ನಾಭಾಯ್, ಪಿಕೆ ಸೇರಿದಂತೆ ಹಲವು ಹಿಟ್​ ಸಿನಿಮಾಗಳನ್ನು ಅವರು ನಿರ್ಮಿಸಿದ್ದಾರೆ. ಅದರಲ್ಲೂ ಕಳೆದ ವರ್ಷದ ಬ್ಲಾಕ್ ಬಸ್ಟರ್ ಬಾಲಿವುಡ್ ಚಿತ್ರ 12th ಫೇಲ್ ಚಿತ್ರವನ್ನು ನಿರ್ದೇಶಿಸಿದ್ದು ವಿಧು ವಿನೋದ್ ಚೋಪ್ರಾ. ಅಂದರೆ ತಂದೆ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ, ಮಗ ಅಗ್ನಿ ಚೋಪ್ರಾ ಕ್ರಿಕೆಟ್ ಅಂಗಳದಲ್ಲಿ ಮಿಂಚುತ್ತಿದ್ದಾರೆ.

5 / 5
Follow us
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ