IPL 2025: ಕಾದು ಕಾದು ಸುಸ್ತಾದ ಅಭಿಮಾನಿಗಳಿಗೆ ಧೋನಿಯಿಂದ ಕಾದು ನೋಡಿ ಉತ್ತರ

IPL 2025 MS Dhoni: ಮಹೇಂದ್ರ ಸಿಂಗ್ ಧೋನಿ ಅವರನ್ನು ಈ ಬಾರಿ ಸಿಎಸ್​ಕೆ ಫ್ರಾಂಚೈಸಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು. ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಹೊರಗುಳಿದು ಐದು ವರ್ಷ ಕಳೆದಿದ್ದರೆ, ಅಂತಹ ಆಟಗಾರರನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಲಿಸ್ಟ್​ನಲ್ಲಿ ಸೇರಿಸಲು ಈ ಬಾರಿ ಅವಕಾಶ ನೀಡಲಾಗಿದೆ. ಹೀಗಾಗಿ ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.

ಝಾಹಿರ್ ಯೂಸುಫ್
|

Updated on: Oct 23, 2024 | 8:03 AM

ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯ ಬಳಿಯೇ ಉತ್ತರವಿಲ್ಲ. ಏಕೆಂದರೆ 18ನೇ ಆವೃತ್ತಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಧೋನಿ ಇನ್ನೂ ಸಹ ಖಚಿತಪಡಿಸಿಲ್ಲ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿಯ ಸಿಇಒ ಬಹಿರಂಗಪಡಿಸಿದ್ದಾರೆ.

1 / 5
ಇತ್ತೀಚೆಗೆ ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಕಾಣಿಸಿಕೊಂಡಿದ್ದರು. ಈ ವೇಳೆ ಮಹೇಂದ್ರ ಸಿಂಗ್ ಧೋನಿ ರಿಟೆನ್ಷನ್ ಬಗ್ಗೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅವರು, ಧೋನಿ ಇನ್ನೂ ಸಹ ನಮಗೆ ಆಡುವ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎಂದು ತಿಳಿಸಿದ್ದಾರೆ.

2 / 5
ಮಹೇಂದ್ರ ಸಿಂಗ್ ಧೋನಿ ಅವರು ಸಿಎಸ್‌ಕೆ ತಂಡದಲ್ಲಿ ಆಡಬೇಕೆಂದು ನಾವು ಬಯಸುತ್ತೇವೆ. ಆದರೆ ಧೋನಿ ಅದನ್ನು ನಮಗೆ ಇನ್ನೂ ಖಚಿತಪಡಿಸಿಲ್ಲ. ಅಲ್ಲದೆ ಅಕ್ಟೋಬರ್ 31ರ ಮೊದಲು ತಿಳಿಸುವುದಾಗಿ ಧೋನಿ ಹೇಳಿದ್ದಾರೆ. ಹೀಗಾಗಿ ನಾವು ಸಹ ಅವರು ನಿಲುವೇನು ಎಂದು ತಿಳಿಯಲು ಕಾಯುತ್ತಿದ್ದೇವೆ ಎಂದು ಸಿಎಸ್​ಕೆ ಸಿಇಒ ಹೇಳಿದ್ದಾರೆ.

3 / 5
ಇತ್ತ ಐಪಿಎಲ್ ರಿಟೈನ್ ಪ್ರಕ್ರಿಯೆಗಳು ಭರದಿಂದ ಸಾಗುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ತಮ್ಮ ನಿಲುವನ್ನು ತಿಳಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ ಅವರು ಮುಂದಿನ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಿಎಸ್​ಕೆ ಕೂಡ ಕಾದು ಕುಳಿತಿದೆ.

4 / 5
ಹೀಗಾಗಿ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಸೀಸನ್-18 ರಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ತಿಳಿಯಲು ಈ ತಿಂಗಳಾಂತ್ಯದವರೆಗೂ ಕಾಯಬೇಕಾಗಿ ಬರಬಹುದು. ಹೀಗೆ ಕಾದು ಕಾದು ಸುಸ್ತಾದ ಅಭಿಮಾನಿಗಳಿಗೆ ಅಕ್ಟೋಬರ್ 31ರೊಳಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

5 / 5
Follow us
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!