AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಧೋನಿಯನ್ನು ಅನ್​ಕ್ಯಾಪ್ಡ್​ ಆಟಗಾರರನ್ನಾಗಿಸಲು CSK ಪ್ಲ್ಯಾನ್

MS Dhoni: ಮಹೇಂದ್ರ ಸಿಂಗ್ ಧೋನಿ 2020 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಧೋನಿ ನಿವೃತ್ತರಾಗಿ 5 ವರ್ಷವಾಗುತ್ತಾ ಬರುತ್ತಿದೆ. ಇದೇ ವೇಳೆ ಐಪಿಎಲ್​ನ ಹಳೆಯ ನಿಯಮವನ್ನು ಜಾರಿಗೆ ತರುವಂತೆ ಚೆನ್ನೈ ಸೂಪರ್ ಕಿಂಗ್ಸ್ ಆಗ್ರಹಿಸಿದೆ. ಈ ಮೂಲಕ ಕಡಿಮೆ ಮೊತ್ತದಲ್ಲಿ ಹೆಚ್ಚಿನ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಲು ಸಿಎಸ್​ಕೆ ಪ್ಲ್ಯಾನ್ ರೂಪಿಸುತ್ತಿದೆ.

ಝಾಹಿರ್ ಯೂಸುಫ್
|

Updated on: Aug 10, 2024 | 11:03 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಕೆಲ ಫ್ರಾಂಚೈಸಿಗಳು ಭರ್ಜರಿ ಪ್ಲ್ಯಾನ್ ರೂಪಿಸುತ್ತಿದೆ. ಹೀಗೆ ಪ್ಲ್ಯಾನ್ ರೂಪಿಸುವುದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಒಂದು ಹೆಜ್ಜೆ ಮುಂದೆ ಹೋಗಿದೆ ಎಂದರೆ ತಪ್ಪಾಗಲಾರದು. ಏಕೆಂದರೆ ಸಿಎಸ್​ಕೆ ಫ್ರಾಂಚೈಸಿಯು ತನ್ನ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದೆ.

1 / 6
ಅಂದರೆ ಮಹೇಂದ್ರ ಸಿಂಗ್ ಧೋನಿಯನ್ನು ಅನ್​ಕ್ಯಾಪ್ಡ್​ ಪ್ಲೇಯರ್ಸ್ ಲಿಸ್ಟ್​ನಲ್ಲಿ ಉಳಿಸಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿ ಯೋಜನೆ ರೂಪಿಸಿದ್ದು, ಇದಕ್ಕಾಗಿ 2008ರ ಹರಾಜಿನ ನಿಯಮವನ್ನು ಮುಂದಿಟ್ಟಿದ್ದಾರೆ. ಇತ್ತೀಚೆಗೆ ನಡೆದ ಐಪಿಎಲ್ ಮಾಲೀಕರ ಮತ್ತು ಬಿಸಿಸಿಐ ಸಭೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಇಂತಹದೊಂದು ಬೇಡಿಕೆಯನ್ನು ಪ್ರಸ್ತಾಪಿಸಿದೆ.

2 / 6
ಐಪಿಎಲ್ 2008ರ ನಿಯಮದ ಪ್ರಕಾರ ಯಾವುದಾದರೂ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾದ 5 ವರ್ಷಗಳ ಬಳಿಕ ಆತನನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಪಟ್ಟಿಗೆ ಪರಿಗಣಿಸಬಹುದು. ಆದರೆ ಈ ನಿಯಮವು ಬಳಕೆಗೆ ಬರದ ಕಾರಣ 2021 ರಲ್ಲಿ ರದ್ದುಗೊಳಿಸಲಾಗಿತ್ತು. ಆದರೀಗ ಅದೇ ನಿಯಮವನ್ನು ಜಾರಿಗೆ ತರುವಂತೆ ಸಿಎಸ್​ಕೆ ಆಗ್ರಹಿಸಿದೆ.

3 / 6
ಸಿಎಸ್​ಕೆ ಫ್ರಾಂಚೈಸಿಯು ಈ ನಿಯಮವನ್ನು ಜಾರಿಗೆ ತರುವಂತೆ ಆಗ್ರಹಿಸಲು ಮುಖ್ಯ ಕಾರಣ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ 5 ವರ್ಷ ಆಗುತ್ತಿರುವುದು. ಇದೀಗ ಈ ನಿಯಮ ಜಾರಿಯಾದರೆ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಳ್ಳಬಹುದು. ಅದು ಸಹ ಕಡಿಮೆ ಮೊತ್ತವನ್ನು ನೀಡುವ ಮೂಲಕ ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 6
ಅಂದರೆ ಕಳೆದ ಸೀಸನ್​ನಲ್ಲಿ ರಿಟೈನ್ ಮಾಡಲಾದ ಅನ್​ಕ್ಯಾಪ್ಡ್ ಆಟಗಾರರಿಗೆ ಕೇವಲ 4 ಕೋಟಿ ರೂ. ನಿಗದಿ ಮಾಡಲಾಗಿತ್ತು. ಈ ಬಾರಿ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಪರಿಗಣಿಸಿದರೆ, ಕಡಿಮೆ ಮೊತ್ತದಲ್ಲಿ ರಿಟೈನ್ ಮಾಡಿಕೊಳ್ಳಬಹುದು. ಇತ್ತ ಧೋನಿಯನ್ನು ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡರೆ, ಮತ್ತೋರ್ವ ರಾಷ್ಟ್ರೀಯ ಆಟಗಾರನನ್ನು ರಿಟೈನ್ ಮಾಡಿಕೊಳ್ಳಲು ಸಿಎಸ್​ಕೆಗೆ ಅವಕಾಶ ದೊರೆಯಲಿದೆ.

5 / 6
ಇದೇ ಪ್ಲ್ಯಾನಿಂಗ್​ನೊಂದಿಗೆ ಸಿಎಸ್​ಕೆ ಫ್ರಾಂಚೈಸಿಯು ಹಳೆಯ ನಿಯಮವನ್ನು ಜಾರಿಗೆ ತರುವಂತೆ ಬಿಸಿಸಿಐಗೆ ಮನವಿ ಸಲ್ಲಿಸಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಈ ಪ್ಲ್ಯಾನ್​​ಗೆ ಸನ್​ರೈಸರ್ಸ್ ಹೈದರಾಬಾದ್ ಸೇರಿದಂತೆ ಕೆಲ ತಂಡಗಳ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ನಿಮಯವು ಜಾರಿಗೆ ಬರುತ್ತಾ ಇಲ್ಲವಾ ಎಂಬುದೇ ಈಗ ಕುತೂಹಲ. ಒಟ್ಟಿನಲ್ಲಿ ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ಸಿಎಸ್​ಕೆ ಭರ್ಜರಿ ಪ್ಲ್ಯಾನ್ ಮಾಡುತ್ತಿದ್ದು, ಈ ಮೂಲಕ ಅತ್ಯುತ್ತಮ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಯೋಜನೆ ರೂಪಿಸುತ್ತಿದ್ದಂತು ಸುಳ್ಳಲ್ಲ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ