IPL 2025: CSK ತಂಡ ಉಳಿಸಿಕೊಳ್ಳುವ ಐವರು ಆಟಗಾರರು ಇವರಂತೆ..!
IPL 2025 CSK: ಐಪಿಎಲ್ ಸೀಸನ್-18ರ ಮೆಗಾ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಛೈಸಿ ರಿಟೈನ್ ಮಾಡಿಕೊಳ್ಳಲಿರುವ ಐವರು ಆಟಗಾರರ ಪಟ್ಟಿಯನ್ನು ರೆಡಿ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಈ ಪಟ್ಟಿಯಲ್ಲಿ ನಾಲ್ವರು ಭಾರತೀಯ ಆಟಗಾರರಿದ್ದರೆ, ಓರ್ವ ವಿದೇಶಿ ಆಟಗಾರನ ಹೆಸರು ಕಾಣಿಸಿಕೊಂಡಿದೆ.
Updated on: Sep 23, 2024 | 10:08 AM

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಚೆನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿಯು ಐವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ. ಈ ಪಟ್ಟಿಯಲ್ಲಿ CSK ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ ಇದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಧೋನಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಪ್ರಸ್ತುತ ಮಾಹಿತಿ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ರಿಟೈನ್ ಆಗಿ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಲಿದೆ. ಇಲ್ಲಿ ಮೊದಲ ರಿಟೈನ್ ಆಗುವ ಆಟಗಾರನಿಗೆ ಅತ್ಯಧಿಕ ಮೊತ್ತ ಸಿಗಲಿದೆ. ಅದರಂತೆ ಕಳೆದ ಬಾರಿ 16 ಕೋಟಿ ರೂ. ಪಡೆದಿದ್ದ ಜಡೇಜಾ ಈ ಬಾರಿ ಸಹ ಬೃಹತ್ ಸಂಭಾವನೆ ಗಿಟ್ಟಿಸಿಕೊಳ್ಳಲಿದ್ದಾರೆ.

ಇನ್ನು ಸಿಎಸ್ಕೆ ತಂಡದ 2ನೇ ರಿಟೈನ್ ಆಟಗಾರ ನಾಯಕ ರುತುರಾಜ್ ಗಾಯಕ್ವಾಡ್. ಹಾಗೆಯೇ ಮೂರನೇ ಆಟಗಾರನಾಗಿ ಆಲ್ ರೌಂಡರ್ ಶಿವಂ ದುಬೆ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಉಳಿಸಿಕೊಳ್ಳಲಿದೆ. ಮತ್ತೊಂದೆಡೆ ಪ್ರಮುಖ ವೇಗಿಗಳಾದ ದೀಪಕ್ ಚಹರ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಈ ಬಾರಿ ಸಿಎಸ್ಕೆ ಕೈ ಬಿಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹಾಗೆಯೇ ವಿದೇಶಿ ಆಟಗಾರರ ಪಟ್ಟಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಶ್ರೀಲಂಕಾದ ಯುವ ವೇಗಿ ಮತೀಶ ಪತಿರಾಣ ಅವರನ್ನು ರಿಟೈನ್ ಮಾಡಲಿದೆ. ಹೀಗಾಗಿ ಸಿಎಸ್ಕೆ ತಂಡದ ಸ್ಟಾರ್ ಆಟಗಾರರಾದ ಡೆವೊನ್ ಕಾನ್ವೆ ಹಾಗೂ ರಚಿನ್ ರವೀಂದ್ರ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಇನ್ನು ಅನ್ ಕ್ಯಾಪ್ಡ್ ಆಟಗಾರ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಳ್ಳಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವತ್ತರಾಗಿ 5 ವರ್ಷ ಕಳೆದಿದ್ದರೆ ಆ ಆಟಗಾರರನ್ನು ಅನ್ ಕ್ಯಾಪ್ಡ್ ಪಟ್ಟಿಗೆ ಸೇರಿಸಿಕೊಳ್ಳಲು ಅವಕಾಶವಿರಲಿದೆ. ಅದರಂತೆ 2020 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿರುವ ಧೋನಿ ಈ ಬಾರಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪ್ರಸ್ತುತ ತಂಡ: ಎಂಎಸ್ ಧೋನಿ, ಮೊಯಿನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮತೀಶ ಪತಿರಾಣ, ಅಜಿಂಕ್ಯ ರಹಾನೆ, ಶೇಕ್ ರಷೀದ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಝ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್.
