IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊದಲ ರಿಟೈನ್ ರಿಷಭ್ ಪಂತ್

|

Updated on: Sep 22, 2024 | 8:31 AM

IPL 2025: ಐಪಿಎಲ್​ನ 17ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದ ರಿಕಿ ಪಾಂಟಿಂಗ್ ಇದೀಗ ಪಂಜಾಬ್ ಕಿಂಗ್ಸ್ ತಂಡದ ನೂತನ ಹೆಡ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹೊಸ ಕೋಚ್​ನೊಂದಿಗೆ ಕಣಕ್ಕಿಳಿಯಲಿದೆ. ಇದಾಗ್ಯೂ ನಾಯಕರಾಗಿ ರಿಷಭ್ ಪಂತ್ ಮುಂದುವರೆಯಲಿದ್ದಾರೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುವುದು ಖಚಿತವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಪಂತ್ ಅವರನ್ನು ಮೊದಲ ರಿಟೈನ್ ಆಗಿ ಆಯ್ಕೆ ಮಾಡಿಕೊಂಡಿದ್ದು, ಹೀಗಾಗಿ ಐಪಿಎಲ್​ 2025 ರಲ್ಲೂ ರಿಷಭ್ ಡೆಲ್ಲಿ ಪರ ಕಣಕ್ಕಿಳಿಯಲಿದ್ದಾರೆ ಎಂದು ಕ್ರಿಕ್​ಬಝ್ ವರದಿ ಮಾಡಿದೆ.

2 / 6
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ರಿಷಭ್ ಪಂತ್ ಹೊರಬರಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯಾಗಿ ಪಂತ್ ಅವರನ್ನು ಖರೀದಿಸಲಿದೆ ಎಂಬ ವದಂತಿಗಳು ಹಬ್ಬಿದ್ದವು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯೇ ಪಂತ್ ಅವರನ್ನು ಉಳಿಸಿಕೊಳ್ಳಲು ಬಯಸಿದ್ದು, ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.

3 / 6
ಬಿಸಿಸಿಐ ಇನ್ನೂ ಸಹ ರಿಟೈನ್ ನಿಯಮವನ್ನು ಪ್ರಕಟಿಸಿಲ್ಲ. ಇಲ್ಲಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಿದ್ದಾರೆ ಎಂಬುದು ಇನ್ನೂ ಸಹ ಗೊತ್ತಾಗಿಲ್ಲ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಮೊದಲ ರಿಟೈನ್ ಆಯ್ಕೆ ರಿಷಭ್ ಪಂತ್ ಆಗಿರಲಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲೂ ಕಣಕ್ಕಿಳಿಯಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಮೂಲಗಳು ತಿಳಿಸಿವೆ.

4 / 6
ಈ ಬಗ್ಗೆ ಚರ್ಚಿಸಲೆಂದೇ ಇತ್ತೀಚೆಗಷ್ಟೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ-ಮಾಲೀಕ ಪಾರ್ಥ್ ಜಿಂದಾಲ್ ಹಾಗೂ ರಿಷಭ್ ಪಂತ್ ಮುಂಬೈನಲ್ಲಿ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಭೇಟಿಯ ವೇಳೆ ಪಂತ್ ಅವರನ್ನು ಮನವೊಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಾಲೀಕರು ಯಶಸ್ವಿಯಾಗಿದ್ದಾರೆ. ಹೀಗಾಗಿ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಭ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಸಹ ಖಚಿತವಾಗಿದೆ.

5 / 6
ರಿಷಭ್ ಪಂತ್ ಅವರಿಗೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಈಗ 16 ಕೋಟಿ ರೂ. ನೀಡುತ್ತಿದೆ. ಇನ್ನು ಮುಂಬರುವ ಸೀಸನ್​ಗೆ ರಿಟೈನ್ ಆದರೆ ಇದೇ ಮೊತ್ತ ಅಥವಾ ಇದಕ್ಕಿಂತ ಹೆಚ್ಚಿನ ಸಂಭಾವನೆ ಸಿಗುವ ಸಾಧ್ಯತೆಯಿದೆ. ಹಾಗೆಯೇ ಐಪಿಎಲ್ 2025 ರಲ್ಲೂ ಡೆಲ್ಲಿ ತಂಡದ ನಾಯಕರಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ.

6 / 6
ರಿಷಭ್ ಪಂತ್ 2021 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಆಗಿ ನೇಮಕವಾಗಿದ್ದರು. ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ಪಂತ್ ತಮ್ಮ ನಾಯಕತ್ವದ ಕೌಶಲ್ಯಗಳನ್ನು ಪ್ರದರ್ಶಿಸಿದ್ದರು. ಇದಾಗ್ಯೂ ಅವರ ಮುಂದಾಳತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಮ್ಮೆಯೂ ಫೈನಲ್​ಗೆ ಪ್ರವೇಶಿಸಿಲ್ಲ. ಆದರೆ ಈ ಬಾರಿ ಹಳೆಯ ನಾಯಕ ಹಾಗೂ ಹೊಸ ಕೋಚ್ ಸಾರಥ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಣಕ್ಕಿಳಿಯಲಿದೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು.

Published On - 8:30 am, Sun, 22 September 24