IPL 2025: ಐಪಿಎಲ್ನಲ್ಲಿ ಡೇವಿಡ್ ವಾರ್ನರ್ ಯುಗಾಂತ್ಯ
IPL 2025 David Warner: ಐಪಿಎಲ್ ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ. ಹೀಗಾಗಿ ಮುಂಬರುವ ಐಪಿಎಲ್ನಲ್ಲಿ ಆಸೀಸ್ನ ಎಡಗೈ ದಾಂಡಿಗ ಕಾಣಿಸಿಕೊಳ್ಳುವುದಿಲ್ಲ.
Updated on: Nov 26, 2024 | 8:42 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮೆಗಾ ಆಕ್ಷನ್ನಲ್ಲಿ ಒಟ್ಟು 182 ಆಟಗಾರರು ಹರಾಜಾಗಿದ್ದಾರೆ. ಈ ಆಟಗಾರರಲ್ಲಿ ಅತ್ಯಧಿಕ ಮೊತ್ತ ಪಡೆದ ಪ್ಲೇಯರ್ ರಿಷಭ್ ಪಂತ್. ಟೀಮ್ ಇಂಡಿಯಾ ವಿಕೆಟ್ ಕೀಪರ್ನನ್ನು ಲಕ್ನೋ ಸೂಪರ್ ಜೈಂಟ್ಸ್ ಬರೋಬ್ಬರಿ 27 ಕೋಟಿ ರೂ. ನೀಡಿ ಖರೀದಿಸಿದೆ. ಆದರೆ ಮತ್ತೊಂದೆಡೆ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮಾರಾಟವಾಗದೇ ಉಳಿದಿದ್ದಾರೆ.

2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಅದರಲ್ಲೂ ಅಂತಿಮ ಸುತ್ತಿನ ಶಾರ್ಟ್ ಲಿಸ್ಟ್ನಲ್ಲೂ ವಾರ್ನರ್ಗೆ ಸ್ಥಾನ ಲಭಿಸಿಲ್ಲ. ಈ ಮೂಲಕ ಡೇವಿಡ್ ವಾರ್ನರ್ ಅನ್ಸೋಲ್ಡ್ ಆಗಿಯೇ ಉಳಿದಿದ್ದಾರೆ.

ಕಳೆದ ಸೀಸನ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ವಾರ್ನರ್ ಈ ಬಾರಿ ಕೂಡ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ 38 ವರ್ಷದ ವಾರ್ನರ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದಾಗಲಿಲ್ಲ. ಇದರೊಂದಿಗೆ ಐಪಿಎಲ್ನಲ್ಲಿ ವಾರ್ನರ್ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

ಏಕೆಂದರೆ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ವಾರ್ನರ್ಗೆ ಮತ್ತೆ ಐಪಿಎಲ್ನಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ. ಅಲ್ಲದೆ ಮುಂದಿನ ಸೀಸನ್ ಮಿನಿ ಹರಾಜಿನ ಮೂಲಕ ಕಂಬ್ಯಾಕ್ ಮಾಡುವುದು ಕೂಡ ಅನುಮಾನ. ಹೀಗಾಗಿಯೇ ಐಪಿಎಲ್ನಲ್ಲಿ ಡೇವಿಡ್ ವಾರ್ನರ್ ಅವರ ಯುಗಾಂತ್ಯವಾಗಿದೆ ಎನ್ನಬಹುದು.

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಸನ್ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ಡೇವಿಡ್ ವಾರ್ನರ್ 184 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.




