AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ ಡೇವಿಡ್ ವಾರ್ನರ್ ಯುಗಾಂತ್ಯ

IPL 2025 David Warner: ಐಪಿಎಲ್ ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ. ಹೀಗಾಗಿ ಮುಂಬರುವ ಐಪಿಎಲ್​ನಲ್ಲಿ ಆಸೀಸ್​ನ ಎಡಗೈ ದಾಂಡಿಗ ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on: Nov 26, 2024 | 8:42 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮೆಗಾ ಆಕ್ಷನ್​ನಲ್ಲಿ ಒಟ್ಟು 182 ಆಟಗಾರರು ಹರಾಜಾಗಿದ್ದಾರೆ. ಈ ಆಟಗಾರರಲ್ಲಿ ಅತ್ಯಧಿಕ ಮೊತ್ತ ಪಡೆದ ಪ್ಲೇಯರ್ ರಿಷಭ್ ಪಂತ್. ಟೀಮ್ ಇಂಡಿಯಾ ವಿಕೆಟ್ ಕೀಪರ್​​ನನ್ನು ಲಕ್ನೋ ಸೂಪರ್ ಜೈಂಟ್ಸ್ ಬರೋಬ್ಬರಿ 27 ಕೋಟಿ ರೂ. ನೀಡಿ ಖರೀದಿಸಿದೆ. ಆದರೆ ಮತ್ತೊಂದೆಡೆ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮಾರಾಟವಾಗದೇ ಉಳಿದಿದ್ದಾರೆ.

1 / 5
2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಅದರಲ್ಲೂ ಅಂತಿಮ ಸುತ್ತಿನ ಶಾರ್ಟ್ ಲಿಸ್ಟ್​​ನಲ್ಲೂ ವಾರ್ನರ್​ಗೆ ಸ್ಥಾನ ಲಭಿಸಿಲ್ಲ. ಈ ಮೂಲಕ ಡೇವಿಡ್ ವಾರ್ನರ್ ಅನ್​ಸೋಲ್ಡ್ ಆಗಿಯೇ ಉಳಿದಿದ್ದಾರೆ.

2 / 5
ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ವಾರ್ನರ್​​​ ಈ ಬಾರಿ ಕೂಡ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ 38 ವರ್ಷದ ವಾರ್ನರ್​ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದಾಗಲಿಲ್ಲ. ಇದರೊಂದಿಗೆ ಐಪಿಎಲ್​ನಲ್ಲಿ ವಾರ್ನರ್ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

3 / 5
ಏಕೆಂದರೆ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​​ಗೆ ಮತ್ತೆ ಐಪಿಎಲ್​​ನಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ. ಅಲ್ಲದೆ ಮುಂದಿನ ಸೀಸನ್ ಮಿನಿ ಹರಾಜಿನ ಮೂಲಕ ಕಂಬ್ಯಾಕ್ ಮಾಡುವುದು ಕೂಡ ಅನುಮಾನ. ಹೀಗಾಗಿಯೇ ಐಪಿಎಲ್​ನಲ್ಲಿ ಡೇವಿಡ್ ವಾರ್ನರ್ ಅವರ ಯುಗಾಂತ್ಯವಾಗಿದೆ ಎನ್ನಬಹುದು.

4 / 5
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ಡೇವಿಡ್ ವಾರ್ನರ್ 184 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Follow Us
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ

ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್

ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ

ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ

ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್

‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ