IPL 2025: ಐದು ಐಪಿಎಲ್ ತಂಡಗಳಿಗೆ ಹೊಸ ನಾಯಕರುಗಳು..!
IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಒಟ್ಟು 46 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಹಾಗೆಯೇ ಬಿಡುಗಡೆ ಮಾಡಿದ ಆಟಗಾರರಲ್ಲಿ ಐವರು ನಾಯಕರುಗಳಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ 5 ತಂಡಗಳ ನಾಯಕರುಗಳು ಬದಲಾಗುವುದು ಖಚಿತ ಎನ್ನಬಹುದು.
1 / 7
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ಐದು ತಂಡಗಳ ನಾಯಕರುಗಳು ಬದಲಾಗುವುದು ಖಚಿತವಾಗಿದೆ. ಏಕೆಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಐದು ಫ್ರಾಂಚೈಸಿಗಳು ಕ್ಯಾಪ್ಟನ್ಗಳನ್ನು ಬಿಡುಗಡೆ ಮಾಡಿದ್ದಾರೆ. ಆ ಕ್ಯಾಪ್ಟನ್ಗಳು ಯಾರೆಂದರೆ....
2 / 7
1- ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿದೆ. ಕಳೆದ ಮೂರು ಸೀಸನ್ಗಳಲ್ಲಿ ಫಾಫ್ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ತಂಡದಿಂದ ಹೊರಬಿದ್ದಿರುವ ಕಾರಣ ಮುಂದಿನ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ ಎನ್ನಬಹುದು.
3 / 7
2- ಕೆಎಲ್ ರಾಹುಲ್: 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಎಲ್ಎಸ್ಜಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸುವ ಸಾಧ್ಯತೆಯಿದೆ.
4 / 7
3- ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಐಪಿಎಲ್ ಮೆಗಾ ಹರಾಜಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸುವುದು ಖಚಿತ ಎನ್ನಬಹುದು.
5 / 7
4- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಕೆಕೆಆರ್ ತಂಡಕ್ಕೆ ಹೊಸ ಕ್ಯಾಪ್ಟನ್ ಆಯ್ಕೆಯಾಗುವುದು ಖಚಿತ.
6 / 7
5- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಐಪಿಎಲ್ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.
7 / 7
ಅಂದರೆ ಈ ಮೇಲಿನ ಐದು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸುವುದು ಬಹುತೇಕ ಖಚಿತ. ಇದರ ಜೊತೆ ಉಳಿದ ಐದು ತಂಡಗಳಲ್ಲಿ ಕೆಲ ಟೀಮ್ಗಳ ಕ್ಯಾಪ್ಟನ್ಸ್ ಕೂಡ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಮೆಗಾ ಹರಾಜಿನ ಬಳಿಕ ಯಾವೆಲ್ಲಾ ಫ್ರಾಂಚೈಸಿ ಹೊಸ ನಾಯಕರುಗಳೊಂದಿಗೆ ಹೊಸ ಅಭಿಯಾನ ಆರಂಭಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
Published On - 11:54 am, Sat, 2 November 24