IPL 2025: RCB ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಔಟ್?

|

Updated on: Jul 30, 2024 | 3:04 PM

IPL 2025 RCB: 2021 ರಲ್ಲಿ ಆರ್​ಸಿಬಿಗೆ ಎಂಟ್ರಿ ಕೊಟ್ಟಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಸೀಸನ್​ನಲ್ಲೇ ಭರ್ಜರಿ ಪ್ರದರ್ಶನ ನೀಡಿದ್ದರು. ಆ ಸೀಸನ್​ನಲ್ಲಿ 15 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಅವರು 6 ಅರ್ಧಶತಕಗಳೊಂದಿಗೆ 513 ರನ್ ಕಲೆಹಾಕಿದ್ದರು. ಆದರೆ ಕಳೆದ ಸೀಸನ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ 10 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 52 ರನ್​ಗಳು ಎಂದರೆ ನಂಬಲೇಬೇಕು.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ಗ್ಲೆನ್ ಮ್ಯಾಕ್ಸ್​ವೆಲ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದಿಂದ ಹೊರಬೀಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇದನ್ನು ಪುಷ್ಠೀಕರಿಸುವಂತೆ ಇದೀಗ ಮ್ಯಾಕ್ಸ್​ವೆಲ್ ಸೋಷಿಯಲ್ ಮೀಡಿಯಾದಲ್ಲಿ ಆರ್​ಸಿಬಿ ತಂಡವನ್ನು ಅನ್​ಫಾಲೋ ಮಾಡಿದ್ದಾರೆ.

2 / 5
ಕಳೆದ ಮೂರು ಸೀಸನ್​ಗಳಿಂದ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಐಪಿಎಲ್ ಫ್ರಾಂಚೈಸಿಗಳ ಮೀಟಿಂಗ್​ಗೂ ಮುನ್ನ ಆರ್​ಸಿಬಿ ಇನ್​ಸ್ಟಾಗ್ರಾಮ್ ಖಾತೆಯನ್ನು ಅನ್​ಫಾಲೋ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಇದೇ ಕಾರಣದಿಂದಾಗಿ ಆರ್​ಸಿಬಿ ಮ್ಯಾಕ್ಸ್​ವೆಲ್ ಅವರನ್ನು ಕೈ ಬಿಡುವುದು ಕನ್​ಫರ್ಮ್ ಎನ್ನಲಾಗುತ್ತಿದೆ.

3 / 5
2021 ರ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿಯು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು 14.25 ಕೋಟಿ ರೂ.ಗೆ ಖರೀದಿಸಿತ್ತು. ಇದಾದ ಬಳಿಕ 2022ರ ಮೆಗಾ ಹರಾಜಿಗೂ ಮುನ್ನ ಅವರನ್ನು 11 ಕೋಟಿ ರೂ. ನೀಡಿ ಉಳಿಸಿಕೊಂಡಿತ್ತು. ಆದರೆ ಈ ಬಾರಿ ಆಸ್ಟ್ರೇಲಿಯಾ ಆಲ್​ರೌಂಡರ್​ನನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

4 / 5
ಏಕೆಂದರೆ ಕಳೆದ ಸೀಸನ್​ನಲ್ಲಿ  ಗ್ಲೆನ್ ಮ್ಯಾಕ್ಸ್​ವೆಲ್ ಅವರ ಕೊಡುಗೆ ಕೇವಲ 52 ರನ್​ಗಳು. ಅಂದರೆ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದರು. ಅದರಲ್ಲೂ ಒಂದೇ ಸೀಸನ್​ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದರು. ಹೀಗಾಗಿಯೇ ಆರ್​ಸಿಬಿ ಮ್ಯಾಕ್ಸ್​ವೆಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

5 / 5
RCB ಪರ 52 ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್​ವೆಲ್ 1266 ರನ್ ಕಲೆಹಾಕಿದ್ದಾರೆ. ಈ ವೇಳೆ 12 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಬೌಲಿಂಗ್​ನಲ್ಲಿ 398 ಎಸೆತಗಳನ್ನು ಎಸೆದಿರುವ ಮ್ಯಾಕ್ಸಿ ಒಟ್ಟು 18 ವಿಕೆಟ್​ಗಳನ್ನು ಕಬಳಿಸಲಷ್ಟೇ ಯಶಸ್ವಿಯಾಗಿದ್ದಾರೆ. ಹೀಗಾಗಿಯೇ ಈ ಬಾರಿಯ ಐಪಿಎಲ್​ ಮೆಗಾ ಹರಾಜಿಗೂ ಮುನ್ನ ಮ್ಯಾಕ್ಸ್​ವೆಲ್ ಅವರನ್ನು ಬಿಡುಗಡೆ ಮಾಡಿ, ಬದಲಿ ಆಲ್​ರೌಂಡರ್​ನ ಖರೀದಿಗೆ ಆರ್​ಸಿಬಿ ಫ್ರಾಂಚೈಸಿ ಮುಂದಾಗಬಹುದು.