IPL 2025: ಮೂವರು ಕ್ಯಾಪ್ಡ್, ಇಬ್ಬರು ಅನ್ಕ್ಯಾಪ್ಡ್ ಪ್ಲೇಯರ್ಸ್ನ ರಿಟೈನ್ ಮಾಡಿದ ಗುಜರಾತ್ ಟೈಟಾನ್ಸ್
IPL 2025 Retention: ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಮೆಗಾ ಹರಾಜಿಗೂ ಮುನ್ನ 3+2 ಸೂತ್ರದಲ್ಲಿ ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಂದರೆ ಮೂವರು ರಾಷ್ಟ್ರೀಯ ತಂಡದ ಆಟಗಾರರು ಹಾಗೂ ಇಬ್ಬರು ದೇಶೀಯ ಆಟಗಾರರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿದೆ.
Updated on: Oct 31, 2024 | 8:23 AM

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ರಿಟೈನ್ ಪಟ್ಟಿಯಲ್ಲಿ ಮೂವರು ಕ್ಯಾಪ್ಡ್ ಪ್ಲೇಯರ್ಸ್ ಇದ್ದರೆ, ಇನ್ನುಳಿದ ಇಬ್ಬರು ಅನ್ಕ್ಯಾಪ್ಡ್. ಅಂದರೆ ಈವರೆಗೆ ರಾಷ್ಟ್ರೀಯ ತಂಡದ ಪರ ಆಡದ ಇಬ್ಬರು ಆಟಗಾರರಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಶುಭ್ಮನ್ ಗಿಲ್: ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಮುಂದಿನ ಸೀಸನ್ನಲ್ಲೂ ಸ್ಟಾರ್ ಆಟಗಾರ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸುವುದು ಖಚಿತ ಎನ್ನಬಹುದು.

ರಶೀದ್ ಖಾನ್: ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಅವರನ್ನು ಸಹ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ. ಅದರಂತೆ ಮುಂದಿನ ಸೀಸನ್ನಲ್ಲೂ ಗುಜರಾತ್ ಟೈಟಾನ್ಸ್ ತಂಡದ ಉಪನಾಯಕರಾಗಿ ರಶೀದ್ ಖಾನ್ ಕಾಣಿಸಿಕೊಳ್ಳುವುದು ಖಚಿತ.

ಸಾಯಿ ಸುದರ್ಶನ್: ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಕಳೆದ ಎರಡು ಸೀಸನ್ಗಳಲ್ಲಿ ಗುಜರಾತ್ ಟೈಟಾನ್ಸ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಮುಂದಿನ ಸೀಸನ್ಗೂ ಸಾಯಿ ಸುದರ್ಶನ್ ಅವರನ್ನು ಗುಜರಾತ್ ಟೈಟಾನ್ಸ್ ರಿಟೈನ್ ಮಾಡಿಕೊಂಡಿದೆ.

ರಾಹುಲ್ ತೆವಾಠಿಯಾ: ಗುಜರಾತ್ ಟೈಟಾನ್ಸ್ ತಂಡದ ಮ್ಯಾಚ್ ಫಿನಿಶರ್ ಆಗಿ ಕಾಣಿಸಿಕೊಂಡಿರುವ ರಾಹುಲ್ ತೆವಾಠಿಯಾ ಅವರನ್ನು ಸಹ ಬಿಡುಗಡೆ ಮಾಡಲಾಗಿಲ್ಲ. ಹೀಗಾಗಿ ಐಪಿಎಲ್ 2025 ರಲ್ಲೂ ತೆವಾಠಿಯಾ ಗುಜರಾತ್ ಟೈಟಾನ್ಸ್ ತಂಡದಲ್ಲೇ ಮುಂದುವರೆಯಲಿದ್ದಾರೆ.

ಶಾರುಖ್ ಖಾನ್: ಸ್ಪೋಟಕ ದಾಂಡಿಗ ಶಾರುಖ್ ಖಾನ್ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡಿದೆ. ಕಳೆದ ಸೀಸನ್ನಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಶಾರುಖ್ ಈ ಬಾರಿ ಕೂಡ ಜಿಟಿ ಪರ ಕಣಕ್ಕಿಳಿಯಲಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




