IPL 2025: ಐಪಿಎಲ್ 2025ರ ಮೊದಲ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಬ್ಯಾನ್

IPL 2025: ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ ತಂಡವು ಮೂರು ಪಂದ್ಯಗಳಲ್ಲಿ ಸ್ಲೋ ಓವರ್ ತಪ್ಪು ಮಾಡಿತ್ತು. ಇದೀಗ ಅದರ ಶಿಕ್ಷಯಾಗಿ ಐಪಿಎಲ್ 2025 ರ ಮೊದಲ ಪಂದ್ಯದಿಂದ ಪಾಂಡ್ಯ ಹೊರಗುಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 27, 2024 | 9:31 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ಕ್ಕಾಗಿ ಎಲ್ಲಾ ತಂಡಗಳು ಸಿದ್ಧಗೊಂಡಿದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬಲಿಷ್ಠ ಪಡೆಯನ್ನು ರೂಪಿಸಿದೆ. ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಆದರೆ ಮೊದಲ ಮ್ಯಾಚ್​​​ನಲ್ಲಿ ಪಾಂಡ್ಯಗೆ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ.

1 / 7
ಏಕೆಂದರೆ ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.

2 / 7
ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್​​ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರ ಮೊದಲ ಪಂದ್ಯವಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊದಲ ಮ್ಯಾಚ್​​ನಲ್ಲಿ ಮುಂಬೈ ಪಡೆಯನ್ನು ಜಸ್​ಪ್ರೀತ್ ಬುಮ್ರಾ ಅಥವಾ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

3 / 7
ಇನ್ನು ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

4 / 7
ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ, ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ ತಲಾ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

5 / 7
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

6 / 7
ಅದರಂತೆ ಕಳೆದ ಸೀಸನ್​​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (2 ಬಾರಿ) ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ  ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2025ರ ಮೊದಲ ಪಂದ್ಯದಿಂದ ಬ್ಯಾನ್ ಆಗಿದ್ದಾರೆ.

7 / 7
Follow us
ಸ್ಥಾನ ಉಳಿಸಿಕೊಳ್ಳಲು ಐಶ್ವರ್ಯಾ ಹೋರಾಟ; ಮಂಜುನೇ ಎದುರು ಹಾಕಿಕೊಂಡ್ರು

ವೀಳ್ಯದೆಲೆ ಗಿಡ ಮನೆಯಲ್ಲಿ ಇದ್ದರೆ ಏನೆಲ್ಲಾ ಲಾಭವಾಗುತ್ತದೆ? ವಿಡಿಯೋ ನೋಡಿ

ಸಣ್ಣ ವಿವಾದ, ಬೈಕ್ ಸವಾರನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಚಾಲಕ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಇಡೇರಲಿವೆ

ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..

ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?

ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು

ಎಟಿಎಂನಿಂದ ಹಣ ದೋಚಿದವ ಹೆಂಡತಿಗಾಗಿ ಎರಡು ಚಿನ್ನದ ಸರಗಳನ್ನು ಖರೀದಿಸಿದ

ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ

ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ