AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇವರು ಐಪಿಎಲ್ ಇತಿಹಾಸದ ಅತ್ಯಂತ ದುಬಾರಿ ಆಟಗಾರರು

IPL 2025: ಐಪಿಎಲ್ ಇತಿಹಾಸದಲ್ಲಿ ಕೇವಲ 5 ಆಟಗಾರರು ಮಾತ್ರ 20 ಕೋಟಿ ರೂ.ಗೂ ಅಧಿಕ ಸಂಭಾವನೆ ಪಡೆದಿದ್ದಾರೆ. ಈ ಐವರಲ್ಲಿ ಭಾರತದ ಏಕೈಕ ಆಟಗಾರನಿರುವುದು ವಿಶೇಷ. ಅಂದರೆ ಐಪಿಎಲ್​ನಲ್ಲಿ 20 ಕೋಟಿ ರೂ.ಗೂ ಅಧಿಕ ಮೊತ್ತ ಪಡೆದ ಮೊದಲ ಭಾರತೀಯ ಆಟಗಾರ ವಿರಾಟ್ ಕೊಹ್ಲಿ.

ಝಾಹಿರ್ ಯೂಸುಫ್
|

Updated on: Nov 04, 2024 | 2:04 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ರಿಟೈನ್ ಪ್ರಕ್ರಿಯೆ ಮುಗಿದಿದೆ. ಈ ಬಾರಿ ಮೂವರು ಆಟಗಾರರು 20 ಕೋಟಿ ರೂ. ಅಧಿಕ ಮೊತ್ತಕ್ಕೆ ರಿಟೈನ್ ಆಗಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರರ ಪಟ್ಟಿಯಲ್ಲೂ ಈ ಮೂವರು ಕಾಣಿಸಿಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ಪಡೆದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ....

1 / 7
ಮಿಚೆಲ್ ಸ್ಟಾರ್ಕ್​: ಐಪಿಎಲ್​ ಇತಿಹಾಸದ ಅತ್ಯಂತ ದುಬಾರಿ ಆಟಗಾರನೆಂದರೆ ಮಿಚೆಲ್ ಸ್ಟಾರ್ಕ್​. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕಳೆದ ಸೀಸನ್​ ಮೆಗಾ ಹರಾಜಿನಲ್ಲಿ ಸ್ಟಾರ್ಕ್ ಅವರನ್ನು ಬರೋಬ್ಬರಿ 24.75 ಕೋಟಿ ರೂ. ನೀಡಿ ಖರೀದಿಸಿದೆ. ಇದುವೇ ಐಪಿಎಲ್​ನಲ್ಲಿ ಆಟಗಾರರೊಬ್ಬರಿಗೆ ಸಿಕ್ಕ ಗರಿಷ್ಠ ಸಂಭಾವನೆ. ಇದಾಗ್ಯೂ ಈ ಬಾರಿ ಸ್ಟಾರ್ಕ್​ ಅವರನ್ನು ಕೆಕೆಆರ್ ಉಳಿಸಿಕೊಂಡಿಲ್ಲ ಎಂಬುದು ವಿಶೇಷ.

2 / 7
ಹೆನ್ರಿಕ್ ಕ್ಲಾಸೆನ್: ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತಕ್ಕೆ ರಿಟೈನ್ ಆದ ಆಟಗಾರನೆಂದರೆ ಅದು ಹೆನ್ರಿಕ್ ಕ್ಲಾಸೆನ್. ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬರೋಬ್ಬರಿ 23 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ.

3 / 7
ವಿರಾಟ್ ಕೊಹ್ಲಿ: ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಭಾರತೀಯ ಆಟಗಾರ ವಿರಾಟ್ ಕೊಹ್ಲಿ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈ ಬಾರಿ ವಿರಾಟ್ ಕೊಹ್ಲಿಗೆ ಬರೋಬ್ಬರಿ 21 ಕೋಟಿ ರೂ. ನೀಡಿ ಉಳಿಸಿಕೊಂಡಿದೆ.

4 / 7
ನಿಕೋಲಸ್ ಪೂರನ್: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು  ನಿಕೋಲಸ್ ಪೂರನ್ ಅವರನ್ನು ಬರೋಬ್ಬರಿ 21 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಈ ಮೂಲಕ ಪೂರನ್ ಐಪಿಎಲ್​ನಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 7
ಪ್ಯಾಟ್ ಕಮಿನ್ಸ್: ಐಪಿಎಲ್​ 2024ರ ಮೆಗಾ ಹರಾಜಿನ ಮೂಲಕ ಪ್ಯಾಟ್ ಕಮಿನ್ಸ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಬರೋಬ್ಬರಿ 20.50 ಕೋಟಿ ರೂ. ಖರೀದಿಸಿತ್ತು. ಆದರೆ ಈ ಬಾರಿ ಕಮಿನ್ಸ್ ಅವರನ್ನು 18 ಕೋಟಿ ರೂ.ಗೆ ಉಳಿಸಿಕೊಳ್ಳುವಲ್ಲಿ ಎಸ್​ಆರ್​ಹೆಚ್ ಯಶಸ್ವಿಯಾಗಿದೆ.

6 / 7
ಸ್ಯಾಮ್ ಕರನ್: ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಪಡೆದ ಇಂಗ್ಲೆಂಡ್ ಆಟಗಾರನ ದಾಖಲೆ ಸ್ಯಾಮ್ ಕರನ್ ಹೆಸರಿನಲ್ಲಿದೆ. 2023ರ ಮೆಗಾ ಹರಾಜಿನಲ್ಲಿ ಕರನ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು 18.5 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಾರಿ ಸ್ಯಾಮ್ ಕರನ್ ಅವರನ್ನು ಪಂಜಾಬ್ ಕಿಂಗ್ಸ್ ಉಳಿಸಿಕೊಂಡಿಲ್ಲ ಎಂಬುದು ವಿಶೇಷ.

7 / 7
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಮೋದಿ ವಾಗ್ದಾಳಿ

ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ

ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ

ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ

ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್

ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ

ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ

Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ