AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಪರ ಆಡ್ಬೇಕು, ಆರ್​ಸಿಬಿಗೆ ಕಪ್ ಗೆಲ್ಲಿಸಿ ಕೊಡ್ಬೇಕು: ಪ್ರಿಯಾಂಶ್ ಆರ್ಯ

Priyansh Arya: ಪ್ರಿಯಾಂಶ್ ಆರ್ಯ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ಅಬ್ಬರಿಸಿದ್ದಾರೆ. ಹಾಗೆಯೇ ಡಿಪಿಎಲ್​ನಲ್ಲಿ 2 ಶತಕ ಬಾರಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐಪಿಎಲ್​ ಅವಕಾಶವನ್ನು ಎದುರು ನೋಡುತ್ತಿರುವ ಯುವ ದಾಂಡಿಗ ಆರ್​ಸಿಬಿ ಪರ ಕಣಕ್ಕಿಳಿಯಬೇಕೆಂಬ ಮನದಾಸೆಯನ್ನು ವ್ಯಕ್ತಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 03, 2024 | 9:03 AM

Share
ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಬೇಕು... ಅಲ್ಲದೆ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿರುವ ಐಪಿಎಲ್ ಟ್ರೋಫಿಯನ್ನು ಗೆದ್ದು ಕೊಡಬೇಕು... ಹೀಗಂದಿದ್ದು ಮತ್ಯಾರೂ ಅಲ್ಲ. ಡೆಲ್ಲಿ ಪ್ರೀಮಿಯರ್ ಲೀಗ್​ನ ಸಿಕ್ಸರ್ ಕಿಂಗ್ ಪ್ರಿಯಾಂಶ್ ಆರ್ಯ. ಪ್ರಸ್ತುತ ನಡೆಯುತ್ತಿರುವ ಡಿಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಪ್ರಿಯಾಂಶ್ ಆರ್​ಸಿಬಿ ಪರ ಆಡಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

1 / 5
ಸೌತ್ ಡೆಲ್ಲಿ ಸೂಪರ್​ ಸ್ಟಾರ್ಸ್ ಪರ ಕಣಕ್ಕಿಳಿಯುತ್ತಿರುವ ಪ್ರಿಯಾಂಶ್ ಆರ್ಯ ಕೇವಲ 9 ಪಂದ್ಯಗಳಿಂದ 602 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳನ್ನು ಸಿಡಿಸಿದ್ದಾರೆ. ತಮ್ಮ ಸ್ಪೋಟಕ ಬ್ಯಾಟಿಂಗ್​ನಿಂದಲೇ ಗುರುತಿಸಿಕೊಂಡಿರುವ ಯುವ ಎಡಗೈ ದಾಂಡಿಗ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಚಾನ್ಸ್ ಸಿಗುವುದನ್ನು ಎದುರು ನೋಡುತ್ತಿದ್ದಾರೆ.

2 / 5
ಈ ಬಗ್ಗೆ ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಿಯಾಂಶ್, ವಿರಾಟ್ ಕೊಹ್ಲಿ ನನ್ನ ನೆಚ್ಚಿನ ಆಟಗಾರ. ಹೀಗಾಗಿ ನಾನು ಸಹ ಆರ್​ಸಿಬಿ ಪರ ಆಡಲು ಬಯಸುತ್ತೇನೆ. ಅವಕಾಶ ಸಿಕ್ಕರೆ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

3 / 5
ಆರ್​ಸಿಬಿ ತಂಡವು ಈವರೆಗೆ ಐಪಿಎಲ್ ಟ್ರೋಫಿ ಗೆದ್ದಿಲ್ಲ. ಈ ಕೊರತೆಯನ್ನು ನೀಗಿಸಬೇಕಿದೆ. ಅದಕ್ಕಾಗಿ ನಾನು ಬ್ಯಾಟಿಂಗ್​ ಮೂಲಕ ನನ್ನಿಂದಾದ ನೆರವು ನೀಡಬಲ್ಲೆ. ಈ ಮೂಲಕ ಆರ್​ಸಿಬಿಗೆ ಚೊಚ್ಚಲ ಟ್ರೋಫಿ ಗೆಲ್ಲಿಸಿಕೊಡಬೇಕೆಂಬ ಆಸೆಯಿದೆ ಎಂದು ಪ್ರಿಯಾಂಶ್ ಆರ್ಯ ತಿಳಿಸಿದ್ದಾರೆ.

4 / 5
ಸದ್ಯ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಸಂಚಲನ ಸೃಷ್ಟಿಸಿರುವ ಪ್ರಿಯಾಂಶ್ ಆರ್ಯ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಈಗಾಗಲೇ ಸೌತ್ ಡೆಲ್ಲಿಯ ಆರಂಭಿಕ ಆಟಗಾರನ ಮೇಲೆ ಕೆಲ ಫ್ರಾಂಚೈಸಿಗಳು ಕಣ್ಣಿಟ್ಟಿದೆ. ಇದಾಗ್ಯೂ ಯುವ ಎಡಗೈ ದಾಂಡಿಗ ಆರ್​ಸಿಬಿ ಪರ ಆಡಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರಿಯಾಂಶ್ ಆರ್ಯರನ್ನು ಈ ಬಾರಿ ಆರ್​ಸಿಬಿ ಖರೀದಿಸಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?

ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!

ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!