- Kannada News Photo gallery Cricket photos IPL 2025: 'I'll Be Putting My Name In IPL Auction: Steve Smith
IPL 2025: ಐಪಿಎಲ್ಗೆ ಸ್ಟೀವ್ ಸ್ಮಿತ್ ರಿಎಂಟ್ರಿ
Steve Smith: ಸ್ಟೀವ್ ಸ್ಮಿತ್ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಚ್ಚಿ ಟಸ್ಕರ್ಸ್ ಕೇರಳ, ಪುಣೆ ವಾರಿಯರ್ಸ್, ರಾಜಸ್ಥಾನ್ ರಾಯಲ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ ಒಟ್ಟು 103 ಪಂದ್ಯಗಳನ್ನಾಡಿರುವ ಸ್ಮಿತ್ 2485 ರನ್ ಕಲೆಹಾಕಿದ್ದಾರೆ. ಅಲ್ಲದೆ ರಾಜಸ್ಥಾನ್ ರಾಯಲ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದಾರೆ.
Updated on: Aug 14, 2024 | 10:55 AM

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಕಳೆದ ಸೀಸನ್ ಹರಾಜಿನಿಂದ ಹೊರಗುಳಿದಿದ್ದ ಸ್ಮಿತ್ ಈ ಬಾರಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ. ಇದಕ್ಕಾಗಿ ಮೆಗಾ ಹರಾಜಿಗೆ ಹೆಸರು ನೋಂದಣಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಸ್ಟೀವ್ ಸ್ಮಿತ್ ಕೊನೆಯ ಬಾರಿ ಐಪಿಎಲ್ನಲ್ಲಿ ಕಾಣಿಸಿಕೊಂಡಿದ್ದು 2021 ರಲ್ಲಿ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಅವರನ್ನು ಐಪಿಎಲ್ 2022 ರ ಹರಾಜಿಗೂ ಮುನ್ನ ಬಿಡುಗಡೆ ಮಾಡಲಾಗಿತ್ತು. ಇನ್ನು 2022 ರಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡರೂ ಆಸೀಸ್ ಆಟಗಾರನನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಇನ್ನು ಐಪಿಎಲ್ 2023ರ ಹರಾಜಿಗೆ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. ಕಳೆದ ಸೀಸನ್ ಐಪಿಎಲ್ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಮಿತ್ ಅವರು ಬಿಕರಿಯಾಗದೇ ಉಳಿದಿದ್ದರು. ಇದಾಗ್ಯೂ ಈ ಬಾರಿ ಸಹ ಐಪಿಎಲ್ ಹರಾಜಿಗೆ ಹೆಸರು ನೀಡುವುದಾಗಿ ಆಸ್ಟ್ರೇಲಿಯಾ ಆಟಗಾರ ತಿಳಿಸಿದ್ದಾರೆ.

ವಿಶೇಷ ಎಂದರೆ ಇತ್ತೀಚೆಗೆ ಮುಗಿದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ವಾಷಿಂಗ್ಟನ್ ಫ್ರೀಡಮ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ 9 ಇನಿಂಗ್ಸ್ಗಳಿಂದ 336 ರನ್ ಚಚ್ಚಿದ್ದರು. ಅಷ್ಟೇ ಅಲ್ಲದೆ ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು.

ಈ ಭರ್ಜರಿ ಪ್ರದರ್ಶನದೊಂದಿಗೆ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆದಿರುವ ಸ್ಟೀವ್ ಸ್ಮಿತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಹೆಸರು ನೀಡಲು ನಿರ್ಧರಿಸಿದ್ದಾರೆ. ಅದರಂತೆ ಮೆಗಾ ಆಕ್ಷನ್ನಲ್ಲಿ ಆಸೀಸ್ ಆಟಗಾರನ ಖರೀದಿಗೆ ಐಪಿಎಲ್ನ ಕೆಲ ಫ್ರಾಂಚೈಸಿಗಳು ಆಸಕ್ತಿವಹಿಸುವ ಸಾಧ್ಯತೆಯಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
