IPL 2025: ಐಪಿಎಲ್​ಗೆ ಸ್ಟೀವ್ ಸ್ಮಿತ್ ರಿಎಂಟ್ರಿ

|

Updated on: Aug 14, 2024 | 10:55 AM

Steve Smith: ಸ್ಟೀವ್ ಸ್ಮಿತ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಚ್ಚಿ ಟಸ್ಕರ್ಸ್ ಕೇರಳ, ಪುಣೆ ವಾರಿಯರ್ಸ್, ರಾಜಸ್ಥಾನ್ ರಾಯಲ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ ಒಟ್ಟು 103 ಪಂದ್ಯಗಳನ್ನಾಡಿರುವ ಸ್ಮಿತ್ 2485 ರನ್ ಕಲೆಹಾಕಿದ್ದಾರೆ. ಅಲ್ಲದೆ ರಾಜಸ್ಥಾನ್ ರಾಯಲ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದಾರೆ.

1 / 5
ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಕಳೆದ ಸೀಸನ್​ ಹರಾಜಿನಿಂದ ಹೊರಗುಳಿದಿದ್ದ ಸ್ಮಿತ್ ಈ ಬಾರಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ. ಇದಕ್ಕಾಗಿ ಮೆಗಾ ಹರಾಜಿಗೆ ಹೆಸರು ನೋಂದಣಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

2 / 5
ಸ್ಟೀವ್ ಸ್ಮಿತ್ ಕೊನೆಯ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದು 2021 ರಲ್ಲಿ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಅವರನ್ನು ಐಪಿಎಲ್ 2022 ರ ಹರಾಜಿಗೂ ಮುನ್ನ ಬಿಡುಗಡೆ ಮಾಡಲಾಗಿತ್ತು. ಇನ್ನು 2022 ರಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡರೂ ಆಸೀಸ್ ಆಟಗಾರನನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

3 / 5
ಇನ್ನು ಐಪಿಎಲ್ 2023ರ ಹರಾಜಿಗೆ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. ಕಳೆದ ಸೀಸನ್​ ಐಪಿಎಲ್ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಮಿತ್ ಅವರು ಬಿಕರಿಯಾಗದೇ ಉಳಿದಿದ್ದರು. ಇದಾಗ್ಯೂ ಈ ಬಾರಿ ಸಹ ಐಪಿಎಲ್ ಹರಾಜಿಗೆ ಹೆಸರು ನೀಡುವುದಾಗಿ ಆಸ್ಟ್ರೇಲಿಯಾ ಆಟಗಾರ ತಿಳಿಸಿದ್ದಾರೆ.

4 / 5
ವಿಶೇಷ ಎಂದರೆ ಇತ್ತೀಚೆಗೆ ಮುಗಿದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ವಾಷಿಂಗ್ಟನ್ ಫ್ರೀಡಮ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ 9 ಇನಿಂಗ್ಸ್​ಗಳಿಂದ 336 ರನ್​ ಚಚ್ಚಿದ್ದರು. ಅಷ್ಟೇ ಅಲ್ಲದೆ ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು.

5 / 5
ಈ ಭರ್ಜರಿ ಪ್ರದರ್ಶನದೊಂದಿಗೆ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆದಿರುವ ಸ್ಟೀವ್ ಸ್ಮಿತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಹೆಸರು ನೀಡಲು ನಿರ್ಧರಿಸಿದ್ದಾರೆ. ಅದರಂತೆ ಮೆಗಾ ಆಕ್ಷನ್​ನಲ್ಲಿ ಆಸೀಸ್ ಆಟಗಾರನ ಖರೀದಿಗೆ ಐಪಿಎಲ್​ನ ಕೆಲ ಫ್ರಾಂಚೈಸಿಗಳು ಆಸಕ್ತಿವಹಿಸುವ ಸಾಧ್ಯತೆಯಿದೆ.