IPL 2025: ಧೋನಿಗಾಗಿ IPL ನಿಯಮವನ್ನೇ ಬದಲಿಸಿದ ಬಿಸಿಸಿಐ

IPL 2025: ಐಪಿಎಲ್ ರಿಟೈನ್ ನಿಯಮದ ಪ್ರಕಾರ, ಫ್ರಾಂಚೈಸಿಯೊಂದು ಐವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಮುಂದಾದರೆ ಮೊದಲ ಆಟಗಾರನಿಗೆ 18 ಕೋಟಿ, ಎರಡನೇ ಆಟಗಾರನಿಗೆ 14 ಕೋಟಿ, ಮೂರನೇ ಆಟಗಾರನಿಗೆ 11 ಕೋಟಿ, ನಾಲ್ಕನೇ ಆಟಗಾರನಿಗೆ 18 ಕೋಟಿ, ಐದನೇ ಆಟಗಾರನಿಗೆ 14 ಕೋಟಿ ರೂ. ನೀಡಬೇಕಾಗುತ್ತದೆ. ಒಂದು ವೇಳೆ ಇಲ್ಲಿ ಅನ್​ಕ್ಯಾಪ್ಡ್ ಆಟಗಾರನನ್ನು ಉಳಿಸಿಕೊಂಡರೆ ಅವರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

ಝಾಹಿರ್ ಯೂಸುಫ್
|

Updated on:Sep 29, 2024 | 9:22 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜು ನಿಯಮಗಳು ಹೊರಬಿದ್ದಿದೆ. ಈ ನಿಯಮಗಳ ಪ್ರಕಾರ, ಪ್ರತಿ ಫ್ರಾಂಚೈಸಿಗಳು ಈ ಬಾರಿಯ ಮೆಗಾ ಆಕ್ಷನ್​ಗೂ ಮುನ್ನ ಒಟ್ಟು ಆರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡರೆ ಓರ್ವ ಆಟಗಾರನ ಮೇಲೆ ಆರ್​ಟಿಎಂ ಕಾರ್ಡ್ ಬಳಸಿಕೊಳ್ಳಬಹುದು.

1 / 6
ಹೀಗೆ ರಿಟೈನ್ ಮಾಡಿಕೊಳ್ಳುವ ಆರು ಆಟಗಾರರಲ್ಲಿ ಇಬ್ಬರು ಅನ್​ಕ್ಯಾಪ್ಡ್ ಆಟಗಾರರಿಗೂ ಅವಕಾಶ ನೀಡಬಹುದು. ಆದರೆ ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ನಿಯಮದಲ್ಲೂ ಬಿಸಿಸಿಐ ಬದಲಾವಣೆ ತಂದಿದೆ. ಅದು ಸಹ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಕೋರಿಕೆಯ ಮೇರೆಗೆ ಎಂಬುದು ಇಲ್ಲಿ ಉಲ್ಲೇಖಾರ್ಹ.

2 / 6
ಐಪಿಎಲ್ 2008ರ ನಿಯಮದ ಪ್ರಕಾರ ಯಾವುದಾದರೂ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾದ 5 ವರ್ಷಗಳ ಬಳಿಕ ಆತನನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಪಟ್ಟಿಗೆ ಪರಿಗಣಿಸಬಹುದಾಗಿತ್ತು. ಆದರೆ ಈ ನಿಯಮವು ಬಳಕೆಗೆ ಬಾರದ ಕಾರಣ 2021 ರಲ್ಲಿ ರದ್ದುಗೊಳಿಸಲಾಗಿತ್ತು. ಆದರೆ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಈ ನಿಯಮವನ್ನು ಮತ್ತೆ ಜಾರಿಗೊಳಿಸುವಂತೆ ಸಿಎಸ್​ಕೆ ಫ್ರಾಂಚೈಸಿ ಬಿಸಿಸಿಐಗೆ ಮನವಿ ಸಲ್ಲಿಸಿತ್ತು. ಇದಕ್ಕೆ ಮುಖ್ಯ ಕಾರಣ ಮಹೇಂದ್ರ ಸಿಂಗ್ ಧೋನಿ.

3 / 6
ಏಕೆಂದರೆ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ 5 ವರ್ಷ ಆಗಿದೆ. ಹೀಗಾಗಿ ಈ ನಿಯಮ ಜಾರಿಯಾದರೆ ಸಿಎಸ್​ಕೆ ಫ್ರಾಂಚೈಸಿಗೆ ಸ್ಟಾರ್ ಆಟಗಾರನನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಅವಕಾಶ ಸಿಗಲಿದೆ. ಹೀಗಾಗಿ ಈ ನಿಯಮವನ್ನು ಮತ್ತೆ ಪರಿಚಯಿಸುವಂತೆ ಸಿಎಸ್​ಕೆ ಆಗ್ರಹಿಸಿತ್ತು. ಅದರಂತೆ ನಿವೃತ್ತಿ ಘೋಷಿಸಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್ ಪಟ್ಟಿಗೆ ಪರಿಗಣಿಸಬಹುದು ಎಂಬ ನಿಯಮ ಈ ಬಾರಿಯ ಮೆಗಾ ಹರಾಜಿನಲ್ಲಿ ಅನ್ವಯವಾಗಲಿದೆ.

4 / 6
ಈ ಮೂಲಕ ಧೋನಿಯನ್ನು ಕಡಿಮೆ ಮೊತ್ತ ನೀಡಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ. ಅಂದರೆ ಮಹೇಂದ್ರ ಸಿಂಗ್ ಧೋನಿಯನ್ನು ಸಿಎಸ್​ಕೆ ಕಳೆದ ಸೀಸನ್​ ಹರಾಜಿಗೂ ಮುನ್ನ 12 ಕೋಟಿ ರೂ. ನೀಡಿ ಉಳಿಸಿಕೊಂಡಿತ್ತು. ಆದರೆ ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡರೆ ಕೇವಲ 4 ಕೋಟಿ ರೂ. ಮಾತ್ರ ನೀಡಿದರೆ ಸಾಕು.

5 / 6
ಇತ್ತ ಧೋನಿಯನ್ನು ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡರೆ, ಮತ್ತೋರ್ವ ರಾಷ್ಟ್ರೀಯ ಆಟಗಾರನನ್ನು ದೊಡ್ಡ ಮೊತ್ತ ನೀಡಿ ರಿಟೈನ್ ಮಾಡಿಕೊಳ್ಳುವ ಅವಕಾಶ ಸಿಎಸ್​ಕೆ ತಂಡಕ್ಕೆ ದೊರೆಯಲಿದೆ. ಇಂತಹದೊಂದು ಪ್ಲ್ಯಾನ್ ರೂಪಿಸಿಯೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಹಳೆಯ ನಿಯಮವನ್ನು ಜಾರಿಗೆ ತರುವಂತೆ ಬಿಸಿಸಿಐಗೆ ಮನವಿ ಮಾಡಿತ್ತು. ಇದೀಗ ಬಿಸಿಸಿಐ ಕೂಡ ಈ ನಿಯಮಕ್ಕೆ ಅಸ್ತು ಎಂದಿದ್ದು, ಹೀಗಾಗಿ ಮೆಗಾ ಹರಾಜಿಗೂ ಮುನ್ನ ಮಹೇಂದ್ರ ಸಿಂಗ್ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಸಿಎಸ್​ಕೆ ರಿಟೈನ್ ಮಾಡುವುದು ಬಹುತೇಕ ಖಚಿತ ಎನ್ನಬಹುದು.

6 / 6

Published On - 8:53 am, Sun, 29 September 24

Follow us
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ

ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ

ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ

ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್

ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ

ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ

ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್

ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್

ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ

Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ