IPL 2025: ಐಪಿಎಲ್ ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಇಲ್ಲಿದೆ
ಝಾಹಿರ್ ಯೂಸುಫ್ | Updated By: ವಿವೇಕ ಬಿರಾದಾರ
Updated on:
Aug 04, 2024 | 2:23 PM
IPL 2025: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದಾಗ್ಯೂ ಈ ಮೂರು ಫ್ರಾಂಚೈಸಿಗಳು ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಹೀಗಾಗಿ ಅಂತಿಮ ಕ್ಷಣದಲ್ಲಿ ಈ ಆಟಗಾರರು ತಮ್ಮ ಹಳೆಯ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.
1 / 12
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಐಪಿಎಲ್ ಫ್ರಾಂಚೈಸಿ ಮತ್ತು ಬಿಸಿಸಿಐ ನಡುವೆ ಮೆಗಾ ಹರಾಜಿನ ಕುರಿತಾಗಿ ಸಭೆ ನಡೆದಿದೆ. ಈ ಸಭೆಯ ಬೆನ್ನಲ್ಲೇ ಈ ಬಾರಿ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವುದು ಖಚಿತವಾಗಿದೆ. ಆದರೆ ಕೆಲ ಫ್ರಾಂಚೈಸಿಗಳು 6 ರಿಂದ 7 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೆಕೆಂಬ ಬೇಡಿಕೆಯಿಟ್ಟಿದೆ.
2 / 12
ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರರನ್ನ ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಯಾವ ಫ್ರಾಂಚೈಸಿ ಯಾವ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು ಎಂದು ನೋಡುವುದಾದರೆ...
3 / 12
ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.
4 / 12
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.
5 / 12
ಮುಂಬೈ ಇಂಡಿಯನ್ಸ್: ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
6 / 12
ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.
7 / 12
ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
8 / 12
ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.
9 / 12
ಪಂಜಾಬ್ ಕಿಂಗ್ಸ್: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
10 / 12
ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.
11 / 12
ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.
12 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.