4+2… IPL 2025 ಮೆಗಾ ಹರಾಜಿಗೆ ಪ್ಲ್ಯಾನ್ ರೆಡಿ
IPL 2025: ಐಪಿಎಲ್ 2025ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಬಿಸಿಸಿಐ ಹಾಗೂ ಐಪಿಎಲ್ ಮಾಲೀಕರ ನಡುವೆ ಸಭೆ ನಡೆದಿದ್ದು, ಈ ಸಭೆಯಲ್ಲಿ ಆಟಗಾರರ ರಿಟೈನ್ ಬಗ್ಗೆ ಚರ್ಚಿಸಲಾಗಿತ್ತು. ಇದೇ ವೇಳೆ ಹೆಚ್ಚು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೇಕೆಂದು ಬಹುತೇಕ ಫ್ರಾಂಚೈಸಿಗಳು ಆಗ್ರಹಿಸಿದ್ದವು.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ರೂಪುರೇಷೆಗಳು ಸಿದ್ಧವಾಗಿದೆ. ಅದಕ್ಕೂ ಮುನ್ನ 10 ಫ್ರಾಂಚೈಸಿಗಳಿಗೆ ಕೆಲ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಅದರಂತೆ ಈ ಬಾರಿ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಿಸಿಸಿಐ ಅನುಮತಿಸಲಿದೆ ಎಂದು ಕೆಲ ವರದಿಗಳು ತಿಳಿಸಿವೆ.
2 / 6
ಹೀಗೆ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಐಪಿಎಲ್ ಫ್ರಾಂಚೈಸಿಗಳು ಮುಂದಾದರೆ ಕೆಲ ಷರತ್ತುಗಳು ಅನ್ವಯವಾಗಲಿದೆ. ಅಂದರೆ ಇಲ್ಲಿ ನಾಲ್ವರನ್ನು ನೇರವಾಗಿ ಉಳಿಸಿಕೊಳ್ಳಲು ಅವಕಾಶವಿದ್ದರೆ, ಮತ್ತಿಬ್ಬರನ್ನು ಆರ್ಟಿಎಂ ಕಾರ್ಡ್ ಬಳಸಿ ರಿಟೈನ್ ಮಾಡಿಕೊಳ್ಳಬೇಕಾಗುತ್ತದೆ.
3 / 6
ಅಂದರೆ ನಾಲ್ವರನ್ನು ತಂಡದಲ್ಲೇ ಉಳಿಸಿಕೊಂಡು, ಮತ್ತಿಬ್ಬರನ್ನು ಆರ್ಟಿಎಂ ಆಯ್ಕೆಯ ಮೂಲಕ ಹರಾಜಿಗೆ ಬಿಡುಗಡೆ ಮಾಡಬೇಕಾಗುತ್ತದೆ. ಹೀಗೆ ಬಿಡುಗಡೆ ಮಾಡಿದ ಆಟಗಾರರ ಸಂಪೂರ್ಣ ಹಕ್ಕು ಆಯಾ ಫ್ರಾಂಚೈಸಿಯ ಬಳಿಯೇ ಇರಲಿದ್ದು, ಹರಾಜಿನ ಬಳಿಕ ಆ ಆಟಗಾರರನ್ನು ಉಳಿಸಿಕೊಳ್ಳಲು ಅಥವಾ ಬಿಡುಗಡೆ ಮಾಡುವ ಆಯ್ಕೆಯನ್ನು ಹೊಂದಿರಲಿದ್ದಾರೆ.
4 / 6
ಉದಾಹರಣೆಗೆ: ಆರ್ಟಿಎಂ ಬಳಸಿದ ಇಬ್ಬರು ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಆಟಗಾರರ ಖರೀದಿಗೆ ಬೇರೊಂದು ಫ್ರಾಂಚೈಸಿ 10 ಕೋಟಿ ರೂ. ಬಿಡ್ ಮಾಡಿದೆ ಎಂದಿಟ್ಟುಕೊಳ್ಳಿ. ಆ ವೇಳೆ ಆರ್ಟಿಎಂ ಬಳಸಿದ ಫ್ರಾಂಚೈಸಿಯು ಆ ಮೊತ್ತವನ್ನು ನಾವೇ ನೀಡುತ್ತೇವೆ ಎಂದು ಆ ಆಟಗಾರನನ್ನು ತನ್ನಲ್ಲೇ ಉಳಿಸಿಕೊಳ್ಳಬಹುದು. ಒಂದು ವೇಳೆ ಆ ಮೊತ್ತ ನೀಡಲು ತಯಾರು ಇರದಿದ್ದರೆ ಮಾತ್ರ ಬಿಡುಗಡೆ ಮಾಡಬೇಕಾಗುತ್ತದೆ.
5 / 6
ಹೀಗೆ ಒಟ್ಟು 4+2 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಬಿಸಿಸಿಐ ಅವಕಾಶ ನೀಡಲಿದೆ ಎಂದು ವರದಿಯಾಗಿದ್ದು, ಅದರಂತೆ ಮುಂಬರುವ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಬಹುತೇಕ ಫ್ರಾಂಚೈಸಿಗಳು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಮುಂದಾಗಲಿದೆ. ಆದರೆ ಹೀಗೆ 6 ಆಟಗಾರರನ್ನು ಉಳಿಸಿಕೊಳ್ಳಲು ಬಯಸಿದರೆ ನಿರ್ದಿಷ್ಟ ಮೊತ್ತವನ್ನು ನೀಡಬೇಕಾಗುತ್ತದೆ ಎಂಬುದು ಇಲ್ಲಿ ಉಲ್ಲೇಖಾರ್ಹ.
6 / 6
ಅಂದರೆ ಪ್ರತಿ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಮೊದಲ, ಎರಡನೇ, ಮೂರನೇ ಮತ್ತು ನಾಲ್ಕನೇ ಆಟಗಾರನಿಗೆ ಇಂತಿಷ್ಟು ಮೊತ್ತವನ್ನು ನಿಗದಿಪಡಿಸಲಾಗುತ್ತದೆ. ಈ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ ಕಳೆಯಲಾಗುತ್ತದೆ. ಹೀಗಾಗಿ ಯಾವ ಫ್ರಾಂಚೈಸಿ ಯಾವ ಆಟಗಾರನಿಗೆ ಎಷ್ಟು ಮೊತ್ತ ನೀಡಿ ರಿಟೈನ್ ಮಾಡಿಕೊಳ್ಳಲಿದೆ ಎಂಬುದು ಕೂಡ ಈಗ ಕುತೂಹಲಕ್ಕೆ ಕಾರಣವಾಗಿದೆ.
Published On - 8:29 am, Sun, 11 August 24