IPL 2025: RCB ಯಲ್ಲಿ ಮುಗಿದ KGF ಅಧ್ಯಾಯ

IPL 2025: ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡದಲ್ಲಿ ಕೆಜಿಎಫ್ ಜೋಡಿಗಳು ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಮುಂಬರುವ ಸೀಸನ್​ಗಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ರಿಲೀಸ್ ಮಾಡಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ಆರ್​ಸಿಬಿ ಅಭಿಮಾನಿಗಳು KGF ಕಮಾಲ್ ಅನ್ನು ಎದುರು ನೋಡುವಂತಿಲ್ಲ.

ಝಾಹಿರ್ ಯೂಸುಫ್
|

Updated on: Nov 02, 2024 | 1:08 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18 ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಲೀಸ್ ಮಾಡಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಮುಂಬರುವ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 6
ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF (ಕೊಹ್ಲಿ, ಗ್ಲೆನ್, ಫಾಫ್) ಜೋಡಿ ಬೇರ್ಪಟ್ಟಂತಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದ ಕೆಜಿಎಫ್ ಜೋಡಿಗಳಾಗಿ ಗುರುತಿಸಿಕೊಂಡಿದ್ದರು. ಇದೀಗ ತ್ರಿವಳಿ ಗುಂಪಿನಿಂದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ.

2 / 6
ಅಲ್ಲದೆ ಮುಂಬರುವ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವ ಸಾಧ್ಯತೆಯಿದೆ. 2022 ರಿಂದ ಆರ್​ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು. ಅಲ್ಲದೆ 45 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ಫಾಫ್ 15 ಅರ್ಧಶತಕಗಳೊಂದಿಗೆ ಒಟ್ಟು 1636 ರನ್ ಕಲೆಹಾಕಿದ್ದಾರೆ.

3 / 6
ಇದಾಗ್ಯೂ ಫಾಫ್ ಡುಪ್ಲೆಸಿಸ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳದಿರಲು ಮುಖ್ಯ ಕಾರಣ ಅವರ ವಯಸ್ಸು. ಏಕೆಂದರೆ ಈಗಾಗಲೇ 40 ವರ್ಷ ದಾಟಿರುವ ಅವರು ಮುಂಬರುವ ಸೀಸನ್​ಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಅಲ್ಲದೆ ಭವಿಷ್ಯದ ದೃಷ್ಟಿಯಲ್ಲಿ ಈಗಲೇ ಆರ್​ಸಿಬಿ ಬದಲಿ ನಾಯಕನನ್ನು ರೂಪಿಸಿಕೊಳ್ಳಬೇಕಿದೆ. ಹೀಗಾಗಿಯೇ ಫಾಫ್ ಡುಪ್ಲೆಸಿಸ್ ಅವರನ್ನು ಕೈ ಆರ್​ಸಿಬಿ ಕೈ ಬಿಟ್ಟಿದೆ.

4 / 6
ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಕೈ ಬಿಡುವ ನಿರ್ಧಾರಕ್ಕೆ ಮುಖ್ಯ ಕಾರಣ ಕಳೆದ ಸೀಸನ್​ನಲ್ಲಿನ ಪ್ರದರ್ಶನ. ಐಪಿಎಲ್ 2024 ರಲ್ಲಿ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದರು. ಅದರಲ್ಲೂ ಒಂದೇ ಸೀಸನ್​ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದರು. ಹೀಗಾಗಿಯೇ ಆರ್​ಸಿಬಿ ಮ್ಯಾಕ್ಸ್​ವೆಲ್ ಅವರನ್ನು ರಿಲೀಸ್ ಮಾಡಿದೆ.

5 / 6
ಇದರೊಂದಿಗೆ ಆರ್​ಸಿಬಿ ತಂಡದ KGF ಬಳಗದಿಂದ G (ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು F (ಫಾಫ್ ಡುಪ್ಲೆಸಿಸ್) ಹೊರಬಿದ್ದಂತಾಗಿದೆ. ಈ ಇಬ್ಬರು ಸ್ಟಾರ್ ಆಟಗಾರರ ಬದಲಿಯಾಗಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಡುವ ದಾಂಡಿಗರು ಯಾರು ಎಂಬುದನ್ನು ತಿಳಿಯಲು ಮೆಗಾ ಹರಾಜಿನವರೆಗೆ ಕಾಯಲೇಬೇಕು.

6 / 6
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್