IPL 2025: ಸ್ಟಾರ್ ಆಟಗಾರಿಗೆ ಕೊಕ್: KKR ತಂಡಲ್ಲಿ 6 ಪ್ಲೇಯರ್ಸ್ ರಿಟೈನ್
IPL 2025 Retention: IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಒಂದು ವೇಳೆ ಐವರು ಅಥವಾ ನಾಲ್ವರನ್ನು ತಂಡದಲ್ಲಿ ಉಳಿಸಿಕೊಂಡರೆ ಕ್ರಮವಾಗಿ ಒಬ್ಬ ಅಥವಾ ಇಬ್ಬರ ಮೇಲೆ ಆರ್ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅಂದರೆ ಆರ್ಟಿಎಂ ಆಯ್ಕೆಯಲ್ಲಿ ಹರಾಜಿಗೆ ಬಿಡುಗಡೆ ಮಾಡಿ, ಮತ್ತೆ ಖರೀದಿಸಬಹುದು.
Updated on:Oct 31, 2024 | 5:37 PM

IPL 2025: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಆರು ಮಂದಿಯಲ್ಲಿ ಪ್ರಸ್ತುತ ತಂಡದ ನಾಯಕ ಶ್ರೇಯಸ್ ಅಯ್ಯರ್ ಇಲ್ಲ. ಹಾಗೆಯೇ ಮಿಚೆಲ್ ಸ್ಟಾರ್ಕ್ ಅವರನ್ನು ಸಹ ಕೆಕೆಆರ್ ಬಿಡುಗಡೆ ಮಾಡಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಿಟೈನ್ ಮಾಡಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ....

ಸುನಿಲ್ ನರೈನ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಅತ್ಯಂತ ಹಿರಿಯ ಆಟಗಾರ ಸುನಿಲ್ ನರೈನ್ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. 2012 ರಿಂದ ಕೆಕೆಆರ್ ತಂಡದ ಭಾಗವಾಗಿರುವ ಅವರನ್ನು ಈ ಸಲ 11 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ರಿಂಕು ಸಿಂಗ್: ಕೆಕೆಆರ್ ತಂಡದ ಮ್ಯಾಚ್ ಫಿನಿಶರ್ ರಿಂಕು ಸಿಂಗ್ ಅವರನ್ನು ಸಹ ಈ ಬಾರಿ ರಿಟೈನ್ ಮಾಡಿಕೊಳ್ಳಲಾಗಿದೆ. ಕಳೆದ ಸೀಸನ್ನಲ್ಲಿ 55 ಲಕ್ಷ ರೂ.ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ರಿಂಕು ಅವರನ್ನು ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದ್ದಾರೆ.

ವರುಣ್ ಚಕ್ರವರ್ತಿ: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತಮ್ಮ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಆದರೆ ಅವರಿಗೆ ನೀಡಲಾದ ಮೊತ್ತವೆಷ್ಟು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ.

ಹರ್ಷಿತ್ ರಾಣಾ: ಕಳೆದ ಸೀಸನ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಹರ್ಷಿತ್ ರಾಣಾ ಅವರನ್ನು ಈ ಬಾರಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ರಾಣಾ ಮುಂದಿನ ಸೀಸನ್ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಆ್ಯಂಡ್ರೆ ರಸೆಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದರು. ಆದರೆ ಅಂತಿಮ ಕ್ಷಣದಲ್ಲಿ ರಸೆಲ್ ಮನವೊಲಿಸುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.

ರಮಣ್ದೀಪ್ ಸಿಂಗ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಯುವ ಆಲ್ರೌಂಡರ್ ರಮಣ್ದೀಪ್ ಸಿಂಗ್ ಅವರನ್ನು ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ.
Published On - 2:08 pm, Thu, 31 October 24

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
