IPL 2025: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಆರು ಮಂದಿಯಲ್ಲಿ ಪ್ರಸ್ತುತ ತಂಡದ ನಾಯಕ ಶ್ರೇಯಸ್ ಅಯ್ಯರ್ ಇಲ್ಲ. ಹಾಗೆಯೇ ಮಿಚೆಲ್ ಸ್ಟಾರ್ಕ್ ಅವರನ್ನು ಸಹ ಕೆಕೆಆರ್ ಬಿಡುಗಡೆ ಮಾಡಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಿಟೈನ್ ಮಾಡಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ....
ಸುನಿಲ್ ನರೈನ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಅತ್ಯಂತ ಹಿರಿಯ ಆಟಗಾರ ಸುನಿಲ್ ನರೈನ್ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. 2012 ರಿಂದ ಕೆಕೆಆರ್ ತಂಡದ ಭಾಗವಾಗಿರುವ ಅವರನ್ನು ಈ ಸಲ 11 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ರಿಂಕು ಸಿಂಗ್: ಕೆಕೆಆರ್ ತಂಡದ ಮ್ಯಾಚ್ ಫಿನಿಶರ್ ರಿಂಕು ಸಿಂಗ್ ಅವರನ್ನು ಸಹ ಈ ಬಾರಿ ರಿಟೈನ್ ಮಾಡಿಕೊಳ್ಳಲಾಗಿದೆ. ಕಳೆದ ಸೀಸನ್ನಲ್ಲಿ 55 ಲಕ್ಷ ರೂ.ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ರಿಂಕು ಅವರನ್ನು ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದ್ದಾರೆ.
ವರುಣ್ ಚಕ್ರವರ್ತಿ: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತಮ್ಮ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಆದರೆ ಅವರಿಗೆ ನೀಡಲಾದ ಮೊತ್ತವೆಷ್ಟು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ.
ಹರ್ಷಿತ್ ರಾಣಾ: ಕಳೆದ ಸೀಸನ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಹರ್ಷಿತ್ ರಾಣಾ ಅವರನ್ನು ಈ ಬಾರಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ರಾಣಾ ಮುಂದಿನ ಸೀಸನ್ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವುದು ಖಚಿತವಾಗಿದೆ.
ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಆ್ಯಂಡ್ರೆ ರಸೆಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದರು. ಆದರೆ ಅಂತಿಮ ಕ್ಷಣದಲ್ಲಿ ರಸೆಲ್ ಮನವೊಲಿಸುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.
ರಮಣ್ದೀಪ್ ಸಿಂಗ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಯುವ ಆಲ್ರೌಂಡರ್ ರಮಣ್ದೀಪ್ ಸಿಂಗ್ ಅವರನ್ನು ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ.
Published On - 2:08 pm, Thu, 31 October 24