IPL 2025: KKR ತಂಡದಿಂದ ಬಿಗ್ ಪ್ಲೇಯರ್ಸ್ ಔಟ್..!

IPL 2025 Retention: ಐಪಿಎಲ್ ಸೀಸನ್-18 ಕ್ಕಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ನಾಲ್ವರಲ್ಲಿ ಸ್ಟಾರ್ ಆಟಗಾರರಾದ ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಹಾಗೂ ಮಿಚೆಲ್ ಸ್ಟಾರ್ಕ್ ಇಲ್ಲ ಎಂಬುದು ವಿಶೇಷ.

|

Updated on: Oct 31, 2024 | 10:53 AM

ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್ ಮೆಗಾ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ಬಿಡುಗಡೆ ಮಾಡಲು ಮುಂದಾಗಿದೆ. ಈ ಆಟಗಾರರಲ್ಲಿ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೂಡ ಇರುವುದು ವಿಶೇಷ. ಅಂದರೆ ಚಾಂಪಿಯನ್ ತಂಡದ ನಾಯಕನನ್ನೇ ಕೆಕೆಆರ್ ರಿಲೀಸ್ ಮಾಡಿರುವುದು ಖಚಿತವಾಗಿದೆ.

1 / 5
ಕ್ರಿಕ್​ಬಝ್ ಮೂಲಗಳ ಮಾಹಿತಿ ಪ್ರಕಾರ, ಶ್ರೇಯಸ್ ಅಯ್ಯರ್ ಅವರು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬರಲು ನಿರ್ಧರಿಸಿದ್ದಾರೆ. ಕೊನೆಯ ಹಂತದವರೆಗೆ ಅಯ್ಯರ್ ಜೊತೆ ಕೆಕೆಆರ್ ಮಾತುಕತೆ ನಡೆಸಿದ್ದು, ಆದರೆ ಇದು ಫಲಪ್ರದವಾಗಿಲ್ಲ. ಹೀಗಾಗಿ ಶ್ರೇಯಸ್ ಅಯ್ಯರ್ ಅವರನ್ನು ಬಿಡುಗಡೆ ಮಾಡಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ನಿರ್ಧರಿಸಿದೆ.

2 / 5
ಹಾಗೆಯೇ ಆ್ಯಂಡ್ರೆ ರಸೆಲ್ ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬರಲು ನಿರ್ಧರಿಸಿದ್ದಾರೆ. 36 ವರ್ಷದ ರಸೆಲ್ ಅವರನ್ನು ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳಲು ಕೆಕೆಆರ್ ಸಿದ್ಧರಿಲ್ಲ. ಹೀಗಾಗಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ವೆಸ್ಟ್ ಇಂಡೀಸ್ ಆಲ್​ರೌಂಡರ್ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಇನ್ನು ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು 24.75 ಕೋಟಿ ರೂ. ನೀಡಿ ಖರೀದಿಸಿದ್ದ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು ಬಿಡುಗಡೆ ಮಾಡಲು ಕೆಕೆಆರ್ ನಿರ್ಧರಿಸಿದೆ. ಹೀಗಾಗಿ ಐಪಿಎಲ್ ಮೆಗಾ ಹರಾಜಿನಲ್ಲಿ ಸ್ಟಾರ್ಕ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

4 / 5
ಅದರಂತೆ ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಶ್ರೇಯಸ್ ಅಯ್ಯರ್, ಮಿಚೆಲ್ ಸ್ಟಾರ್ಕ್​ ಹಾಗೂ ಆ್ಯಂಡ್ರೆ ರಸೆಲ್ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಈ ಹರಾಜಿನ ಮೂಲಕ ಈ ಮೂವರು ಯಾವ ತಂಡದ ಪಾಲಾಗಲಿದ್ದಾರೆ ಕಾದು ನೋಡಬೇಕಿದೆ.

5 / 5
Follow us
‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ

Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ

Nithya Bhavishya: ನರಕ ಚತುರ್ದಶಿ ದಿನದ ರಾಶಿ ಭವಿಷ್ಯ ತಿಳಿಯಿರಿ

ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು

ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ

‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್​ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್

ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು

ಜೈಲಿಂದ ಆಚೆ ಬರುವ ಮೊದಲು ದರ್ಶನ್ ಟಿ-ಶರ್ಟ್ ಬದಲಾಯಿಸಿದರು

ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ

ದರ್ಶನ್ ನಿಜವಾದ ಅಭಿಮಾನಿಗಳು ಜೈಲು ಮುಂದೆ ನೆರೆದು ನಟನಿಗಾಗಿ ಕಾಯ್ತಿದ್ದಾರೆ