- Kannada News Photo gallery Cricket photos IPL 2025: KL Rahul and Siraj Base Price in IPL Mega Auction
IPL 2025: ಗರಿಷ್ಠ ಮೂಲ ಬೆಲೆ ಘೋಷಿಸಿದ ಕೆಎಲ್ ರಾಹುಲ್, ಸಿರಾಜ್, ರಿಷಭ್ ಪಂತ್
IPL 2025 Mega Auction: ಐಪಿಎಲ್ ಮೆಗಾ ಹರಾಜಿನ ಗರಿಷ್ಠ ಮೂಲ ಬೆಲೆ 2 ಕೋಟಿ ರೂ. ಅಂದರೆ ಎರಡು ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಳ್ಳಲಿರುವ ಆಟಗಾರರ ಬಿಡ್ಡಿಂಗ್ 2 ಕೋಟಿ ರೂ. ನಿಂದ ಶುರುವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಕೆಲ ಆಟಗಾರರು ತಮ್ಮ ಬೇಸ್ ಪ್ರೈಸ್ ಅನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ.
Updated on: Nov 06, 2024 | 12:58 PM

IPL 2025: ಐಪಿಎಲ್ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಆಟಗಾರರ ನೋಂದಣಿ ಪ್ರಕ್ರಿಯೆ ಮುಗಿದೆ. ಇನ್ನುಳಿದಿರುವುದು ಮೆಗಾ ಹರಾಜು ಪ್ರಕ್ರಿಯೆ. ಇದಕ್ಕಾಗಿ ನವೆಂಬರ್ 24 ಮತ್ತು 25 ದಿನಾಂಕವನ್ನು ನಿಗದಿ ಮಾಡಲಾಗಿದೆ.

ಅದರಂತೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜಿದ್ದಾದಲ್ಲಿ ಆಟಗಾರರ ಮೆಗಾ ಆಕ್ಷನ್ ನಡೆಯಲಿದೆ. ಈ ಹರಾಜಿಗಾಗಿ ಟೀಮ್ ಇಂಡಿಯಾದ ಮೂವರು ಆಟಗಾರರು 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ. ಅವರೆಂದರೆ...

ರಿಷಭ್ ಪಂತ್: ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ರಿಷಭ್ ಪಂತ್ 16 ಕೋಟಿ ರೂ. ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿರುವ ಪಂತ್ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ.

ಮೊಹಮ್ಮದ್ ಸಿರಾಜ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಏಳು ಸೀಸನ್ ಆಡಿರುವ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ತಂಡದಿಂದ ರಿಲೀಸ್ ಮಾಡಲಾಗಿದೆ. ಇದೀಗ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಸಿರಾಜ್ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ.

ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಕೂಡ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್ನಲ್ಲಿ ಎಲ್ಎಸ್ಜಿ ಫ್ರಾಂಚೈಸಿಯಿಂದ 17 ಕೋಟಿ ರೂ. ಪಡೆದಿದ್ದ ರಾಹುಲ್ ಈ ಬಾರಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
