IPL 2025 ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡ್ತೀನಿ: ಕೆಎಲ್ ರಾಹುಲ್
KL Rahul: ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವನ್ನು ರಾಹುಲ್ ವ್ಯಕ್ತಪಡಿಸಿದ್ದಾರೆ.
Updated on: Nov 12, 2024 | 12:31 PM

ಕೆಎಲ್ ರಾಹುಲ್ ಭಾರತ ಟಿ20 ತಂಡದಿಂದ ಹೊರಬಿದ್ದು 2 ವರ್ಷಗಳೇ ಕಳೆದಿವೆ. 2022ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ಪಣತೊಟ್ಟಿದ್ದಾರೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೂಲಕ ಎಂಬುದು ವಿಶೇಷ.

ಐಪಿಎಲ್ 2025 ರಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಾನು ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದ್ದೇನೆ. ಹಾಗಾಗಿ ಈ ಬಾರಿಯ ಐಪಿಎಲ್ನೊಂದಿಗೆ ನಾನು ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.

ಸ್ವಲ್ಪ ಸಮಯದಿಂದ ನಾನು T20 ತಂಡದಿಂದ ಹೊರಗಿದ್ದೇನೆ. ತಂಡಕ್ಕೆ ಕಂಬ್ಯಾಕ್ ಮಾಡಲು ನಾನು ಏನು ಮಾಡಬೇಕೆಂದು ನನಗೆ ತಿಳಿದಿದೆ. ಹಾಗಾಗಿ, ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮತ್ತೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.

ವಿಶೇಷ ಎಂದರೆ ಈ ಬಾರಿಯ ಐಪಿಎಲ್ನಲ್ಲಿ ಕೆಎಲ್ ರಾಹುಲ್ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ಕೆಎಲ್ಆರ್ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-18 ರಲ್ಲಿ ರಾಹುಲ್ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತ.

ಇನ್ನು ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಭಾರತ ಟಿ20 ತಂಡದಿಂದ ಹೊರಗುಳಿದಿರುವ ರಾಹುಲ್ ಮುಂಬರುವ ಐಪಿಎಲ್ ಮೂಲಕ ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.
























