IPL 2025 ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡ್ತೀನಿ: ಕೆಎಲ್ ರಾಹುಲ್

|

Updated on: Nov 12, 2024 | 12:31 PM

KL Rahul: ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್​ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವನ್ನು ರಾಹುಲ್ ವ್ಯಕ್ತಪಡಿಸಿದ್ದಾರೆ.

1 / 5
ಕೆಎಲ್ ರಾಹುಲ್ ಭಾರತ ಟಿ20 ತಂಡದಿಂದ ಹೊರಬಿದ್ದು 2 ವರ್ಷಗಳೇ ಕಳೆದಿವೆ. 2022ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ಪಣತೊಟ್ಟಿದ್ದಾರೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೂಲಕ ಎಂಬುದು ವಿಶೇಷ.

2 / 5
ಐಪಿಎಲ್ 2025 ರಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಾನು ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದ್ದೇನೆ. ಹಾಗಾಗಿ ಈ ಬಾರಿಯ ಐಪಿಎಲ್​ನೊಂದಿಗೆ ನಾನು ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.

3 / 5
ಸ್ವಲ್ಪ ಸಮಯದಿಂದ ನಾನು T20 ತಂಡದಿಂದ ಹೊರಗಿದ್ದೇನೆ. ತಂಡಕ್ಕೆ ಕಂಬ್ಯಾಕ್ ಮಾಡಲು ನಾನು ಏನು ಮಾಡಬೇಕೆಂದು ನನಗೆ ತಿಳಿದಿದೆ. ಹಾಗಾಗಿ, ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮತ್ತೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.

4 / 5
ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ಕೆಎಲ್​ಆರ್​ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-18 ರಲ್ಲಿ ರಾಹುಲ್ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತ.

5 / 5
ಇನ್ನು ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್​ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಭಾರತ ಟಿ20 ತಂಡದಿಂದ ಹೊರಗುಳಿದಿರುವ ರಾಹುಲ್ ಮುಂಬರುವ ಐಪಿಎಲ್​ ಮೂಲಕ ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.