ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ (KL Rahul) ಅವರನ್ನು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಎಲ್ಎಸ್ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಕನ್ಫರ್ಮ್ ಆದಂತಾಗಿದೆ.