IPL 2025: ಕೆಎಲ್ ರಾಹುಲ್ ಔಟ್: LSG ತಂಡದ ರಿಟೈನ್ ಆಟಗಾರರ ಪಟ್ಟಿ ಇಲ್ಲಿದೆ
IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 3+2 ಸೂತ್ರದಡಿಯಲ್ಲಿ ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಹೀಗೆ ರಿಟೈನ್ ಮಾಡಿಕೊಳ್ಳಲಾದ ಆಟಗಾರರಲ್ಲಿ ಮೂವರು ಕ್ಯಾಪ್ಡ್ ಆಟಗಾರರಿದ್ದರೆ, ಇಬ್ಬರು ಅನ್ಕ್ಯಾಪ್ಡ್ ಆಟಗಾರರು.
Updated on: Oct 31, 2024 | 12:17 PM

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಐದು ಆಟಗಾರರಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಇಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ರ ಮೆಗಾ ಹರಾಜಿನಲ್ಲಿ ರಾಹುಲ್ ಕಾಣಿಸಿಕೊಳ್ಳುವುದು ಕನ್ಫರ್ಮ್. ಇನ್ನು LSG ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರುವ 5 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ನಿಕೋಲಸ್ ಪೂರನ್: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದಕ್ಕಾಗಿ ಪೂರನ್ಗೆ 21 ಕೋಟಿ ರೂ. ನೀಡಲು ಎಲ್ಎಸ್ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಮಯಾಂಕ್ ಯಾದವ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಎರಡನೇ ರಿಟೈನ್ ಯುವ ವೇಗಿ ಮಯಾಂಕ್ ಯಾದವ್. ಟೀಮ್ ಇಂಡಿಯಾ ಆಟಗಾರನನ್ನು ಎಲ್ಎಸ್ಜಿ 11 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

ರವಿ ಬಿಷ್ಣೋಯ್: ಎಲ್ಎಸ್ಜಿ ಫ್ರಾಂಚೈಸಿಯ ಮೂರನೇ ರಿಟೈನ್ ಯುವ ಸ್ಪಿನ್ನರ್ ರವಿ ಬಿಷ್ಣೋಯ್. ಕಳೆದ ಮೂರು ಸೀಸನ್ಗಳಿಂದ ಲಕ್ನೋ ತಂಡದ ಭಾಗವಾಗಿರುವ ಬಿಷ್ಣೋಯ್ ಅವರನ್ನು 11 ಕೋಟಿ ರೂ.ಗೆ ಎಲ್ಎಸ್ಜಿ ತಂಡದಲ್ಲೇ ಉಳಿಸಿಕೊಂಡಿದೆ.

ಆಯುಷ್ ಬದೋನಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ಆಟಗಾರ ಆಯುಷ್ ಬದೋನಿಯನ್ನು ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಯುವ ಆಟಗಾರನಿಗೆ 4 ಕೋಟಿ ರೂ. ನೀಡಲಿದೆ.

ಮೊಹ್ಸಿನ್ ಖಾನ್: ಎಲ್ಎಸ್ಜಿ ಫ್ರಾಂಚೈಸಿಯು ಎಡಗೈ ವೇಗಿ ಮೊಹ್ಸಿನ್ ಖಾನ್ ಅವರನ್ನು ಸಹ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಅದರಂತೆ ಮೊಹ್ಸಿನ್ ಕೂಡ ಐಪಿಎಲ್ 2025 ರಲ್ಲಿ ಲಕ್ನೋ ಪರ ಕಣಕ್ಕಿಳಿಯಲಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
